ಬಿ.ವಿ.ಶ್ರೀನಿವಾಸ್ ವಿರುದ್ಧ ಕಿರುಕುಳದ ಆರೋಪ: ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಉಚ್ಛಾಟನೆ, ಬಿಜೆಪಿ ಟೀಕೆ

ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಬಿ.ವಿ.ಶ್ರೀನಿವಾಸ್, ಅಂಗ್ಕಿತಾ ದತ್ತಾ
ಬಿ.ವಿ.ಶ್ರೀನಿವಾಸ್, ಅಂಗ್ಕಿತಾ ದತ್ತಾ

ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಕೂಡಲೇ ಜಾರಿಗೆ ಬರುವಂತೆ ಅಸ್ಸಾಂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅಂಗ್ಕಿತಾ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ, ಕಾಂಗ್ರೆಸ್‌ನ ಶಿಸ್ತು ಕ್ರಿಯಾ ಸಮಿತಿಯ ಸದಸ್ಯ ಕಾರ್ಯದರ್ಶಿ ತಾರಿಕ್ ಅನ್ವರ್ ಆದೇಶದಲ್ಲಿ ತಿಳಿಸಿದ್ದಾರೆ.

"ಹಿಂದಿನ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೇಶವ್ ಕುಮಾರ್ ಲೈಂಗಿಕ ಕಿರುಕುಳ ನೀಡಿದಾಗ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗಿತ್ತು. ಈಗ 6 ತಿಂಗಳಿನಿಂದ ಬಿ ವಿ ಶ್ರೀನಿವಾಸ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರೂ ಯಾವುದೇ  ವಿಚಾರಣೆ ಪ್ರಾರಂಭಿಸಿಲ್ಲ. ಇದು ನನ್ನ ರಾಜಕೀಯ ವೃತ್ತಿಜೀವನದ ಅಂತ್ಯಕ್ಕೆ ಕಾರಣವಾಗಬಹುದು ಎಂಬುದು ತಿಳಿದಿದೆ. ಇದಕ್ಕೆ ಬೆಲೆ ತೆರಬೇಕಾದರೆ, ಅದಕ್ಕೂ ಸಿದ್ದನಿದ್ದೇನೆ. ನಾನು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇನೆ ಎಂಬ ಅನುಮಾನವಿದ್ದಲ್ಲಿ ಬಂದು ನನ್ನ ಮನೆ ಮತ್ತು ಕಚೇರಿಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಿ ಎಂದು ಅಂಗ್ಕಿತಾ ಶುಕ್ರವಾರ ಟ್ವೀಟ್ ಮಾಡಿದ್ದರು.

ಅಂಗ್ಕಿತಾ ದತ್ತಾ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇದು ಅದರ ಮಹಿಳಾ ಸಬಲೀಕರಣದ ಮಾದರಿಯಾಗಿದೆ ಎಂದು ಟೀಕಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com