ಕೋವಿಡ್-19: ದೇಶದಲ್ಲಿಂದು 6,660 ಸೋಂಕು ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,660 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 63,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on: 

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 6,660 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 63,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

24 ಗಂಟೆಗಳಲ್ಲಿ ಕೇರಳದಲ್ಲಿ ಒಂಬತ್ತು ಮಂದಿ ಸಾವು ಸೇರಿದಂತೆ ದೇಶದಲ್ಲಿ ಈವರೆಗೆ 5,31,369 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ದೈನಂದಿನ ಪಾಸಿಟಿವಿಟಿ ದರ ಶೇ 3.52ರಷ್ಟಿದೆ ಮತ್ತು ವಾರದ ಪಾಸಿಟಿವಿಟಿ ದರ ಶೇ 5.42ರಷ್ಟಿದೆ. ದೇಶದಲ್ಲಿ ಈವರೆಗೆ 4.49 ಕೋಟಿಗೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.14ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.67ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು ದೇಶದಾದ್ಯಂತ 4,43, 11,078 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com