ನಮ್ಮಿಬ್ಬರ ಕಿತ್ತಾಟದಲ್ಲಿ ಜನ ಜಗಳವಾಡುವಂತೆ ಮಾಡಬೇಡಿ: ಮಾಧ್ಯಮಗಳಿಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮನವಿ

ನನ್ನ ಮತ್ತು ಸಚಿನ್ ಪೈಲಟ್ ಜೊತೆಗಿನ ಜಗಳದ ನಡುವೆ ರಾಜ್ಯದ ಜನ ಹೊಡೆದಾಡಿಕೊಳ್ಳುವಂತೆ ಮಾಡಬೇಡಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್
Updated on

ಜೈಪುರ: ನನ್ನ ಮತ್ತು ಸಚಿನ್ ಪೈಲಟ್ ಜೊತೆಗಿನ ಜಗಳದ ನಡುವೆ ರಾಜ್ಯದ ಜನ ಹೊಡೆದಾಡಿಕೊಳ್ಳುವಂತೆ ಮಾಡಬೇಡಿ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗಿನ ಸಂವಾದದ ವೇಳೆ ಮಾತನಾಡಿದ ಅವರು, ತಮ್ಮ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಚುನಾವಣೆಗೆ ಹೋಗುವುದಾಗಿ ಹೇಳಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಮಾಡಿದ ಕೆಲಸಗಳ ಆಧಾರದ ಮೇಲೆ ತಮ್ಮ ಪಕ್ಷವು ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ವಿಶ್ವಾಸ ವ್ಯಕ್ತಪಡಿಸಿದರು. ಸಚಿನ್ ಪೈಲಟ್ ಜೊತೆ ನಡೆಯುತ್ತಿರುವ ಜಗಳದ ಹಿನ್ನೆಲೆಯಲ್ಲಿ ಗೆಹ್ಲೋಟ್ಈ ರೀತಿ ಹೇಳಿದ್ದಾರೆ. 2018ರ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದಾಗಿನಿಂದಲೂ ಮುಖ್ಯಮಂತ್ರಿ ಹುದ್ದೆಗೆ ಇಬ್ಬರೂ ಜಗಳವಾಡುತ್ತಿದ್ದಾರೆ.

ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಿ ಸಚಿನ್ ಪೈಲಟ್  ಅಹೋರಾತ್ರಿ ಉಪವಾಸ ಕೈಗೊಳ್ಳುವ ಮೂಲಕ ಗೆಹ್ಲೋಟ್ ವಿರುದ್ಧ ಮತ್ತೊಂದು ಹೋರಾಟ ಆರಂಭಿಸಿದ್ದರು. ಸಚಿನ್ ಪೈಲಟ್ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಸಿಎಂ ಗೆಹ್ಲೋಟ್, ಮಾಧ್ಯಮಗಳು ಜನರು ಬಡಿದಾಡಿಕೊಳ್ಳುವಂತೆ ಮಾಡಬಾರದು ಎಂದಿದ್ದಾರೆ.

ಸತ್ಯ ಮತ್ತು ನಿಖರವಾದ ವಿಷಯವನ್ನಷ್ಟೇ ಪ್ರಸಾರ ಮಾಡುವುದು ಮಾಧ್ಯಮಗಳ ಕರ್ತವ್ಯವಾಗಿದೆ, ಇದು ಸಾರ್ವಜನಿಕ ಹಿತಾಸಕ್ತಿಯೂ ಆಗಿದೆ ಎಂದು ಹೇಳಿದ್ದಾರೆ, ಸುಳ್ಳು ಅಂಕಿಅಂಶಗಳನ್ನು ಪ್ರಸ್ತುತಪಡಿಸಿ ಅಥವಾ ನಮ್ಮನ್ನು ಸುಮ್ಮನೆ ಹೊಗಳಿ ಎಂದು ನಾನು ಹೇಳುವುದಿಲ್ಲ.  ಆದರೆ ಮಾಧ್ಯಮಗಳು ಸತ್ಯದ ಆಧಾರದ ಮೇಲೆ ನಡೆಯಬೇಕೆಂದು ನಾನು ಬಯಸುತ್ತೇನೆ. ಮಾಧ್ಯಮವು ಕೇಂದ್ರ ಸರ್ಕಾರದ ಒತ್ತಡದಲ್ಲಿದೆ ಆದರೆ ಅವರು ಸಾರ್ವಜನಿಕರ ಹಿತಾಸಕ್ತಿಗಳನ್ನು ನೋಡಬೇಕು ಎಂದು ಗೆಹ್ಲೋಟ್ ಸುದ್ದಿಗಾರರಿಗೆ ತಿಳಿಸಿದರು.

ತಮ್ಮ ಸರ್ಕಾರದ ಯೋಜನೆಗಳು ಮತ್ತು ಮುಂಬರುವ ವಿಧಾನಸಭಾ ಚುನಾವಣೆಗಳ ಬಗ್ಗೆ, ಪಕ್ಷದ ಪ್ರಚಾರವು ಅವರ ವಿತರಣೆಯ ಯೋಜನೆಗಳ ಮೇಲೆ ಕೇಂದ್ರೀಕರಿಸುತ್ತದೆ ಎಂದು ಗೆಹ್ಲೋಟ್ ಹೇಳಿದರು.

ಚುನಾವಣೆಯಲ್ಲಿ, ಪ್ರಧಾನಿ (ನರೇಂದ್ರ ಮೋದಿ), (ಕೇಂದ್ರ ಗೃಹ ಸಚಿವ) ಅಮಿತ್ ಶಾ ಅವರು ದೊಡ್ಡ ರೋಡ್ ಶೋಗಳಲ್ಲಿ ಭಾಗವಹಿಸುತ್ತಾರೆ, ಹಣ ಖರ್ಚು ಮಾಡುತ್ತಾರೆ. ಚುನಾವಣೆ ಗೆಲ್ಲಲು ಎಲ್ಲವನ್ನೂ ಮಾಡುತ್ತಾರೆ. ಆದರೆ ನಾವು  ನಮ್ಮ ಅಭಿವೃದ್ಧಿ ಆಧಾರದ ಮೇಲೆ ಮುನ್ನಡೆಯಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಈ ವರ್ಷದ ಕೊನೆಯಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು,  ರಾಜ್ಯ ಸರ್ಕಾರವು ಅನೇಕ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದೆ, ಅವುಗಳ ಅನುಷ್ಠಾನಕ್ಕೆ ಅತ್ಯುತ್ತಮ ಹಣಕಾಸಿನ ನಿರ್ವಹಣೆ ಮಾಡಿದ್ದು ಮತ್ತು ಯಾವುದೇ ತೆರಿಗೆಯನ್ನು ವಿಧಿಸಿಲ್ಲ ಎಂದು ಶ್ಲಾಘಿಸಿದರು. ಸಾರ್ವಜನಿಕರ ಸೇವೆ ಮತ್ತು ಭರವಸೆಗಳನ್ನು ಈಡೇರಿಸುವ ಪ್ರತಿಜ್ಞೆಯನ್ನು ಸರ್ಕಾರ ಈಡೇರಿಸುತ್ತಿದೆ ಎಂದು ಗೆಹ್ಲೋಟ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com