ಪ್ರಕಾಶ್ ಸಿಂಗ್ ಬಾದಲ್
ಪ್ರಕಾಶ್ ಸಿಂಗ್ ಬಾದಲ್

ಪ್ರಕಾಶ್‌ ಸಿಂಗ್‌ ಬಾದಲ್‌ ನಿಧನ: 2 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರ್ಕಾರ!

ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್‌ ಸಿಂಗ್‌ ಬಾದಲ್‌ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

ಅಮೃತಸರ: ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಹಾಗೂ ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್‌ ಸಿಂಗ್‌ ಬಾದಲ್‌ (95) ಮಂಗಳವಾರ ರಾತ್ರಿ ವಿಧಿವಶರಾಗಿದ್ದು, ಅವರ ಗೌರವಾರ್ಥ ಕೇಂದ್ರ ಸರ್ಕಾರ 2 ದಿನ ಶೋಕಾಚರಣೆ ಘೋಷಣೆ ಮಾಡಿದೆ.

ಕೆಲ ದಿನಗಳಿಂಗ ಅನಾರೋಗ್ಯದಿಂದ ಬಳಲುತ್ತಿದ್ದ ಬಾದಲ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕಾರಣ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಇಂದು ರಾತ್ರಿ 8 ಗಂಟೆಗೆ ನಿಧನರಾಗಿದ್ದಾರೆ. 

ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ಅವರ ಗೌರವಾರ್ಥವಾಗಿ ಗೃಹ ವ್ಯವಹಾರಗಳ ಸಚಿವಾಲಯವು ಏಪ್ರಿಲ್ 26 ಮತ್ತು 27 ರಂದು ಭಾರತದಾದ್ಯಂತ ಎರಡು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಈ ವೇಳೆ ರಾಷ್ಟ್ರ ಧ್ವಜ ಅರ್ಧ ಮಟ್ಟದಲ್ಲಿ ಹಾರಾಡಲಿದ್ದು, ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಗೌರವ ಸೂಚಕವಾಗಿ ಎರಡು ದಿನಗಳ ರಾಜ್ಯ ಶೋಕಾಚರಣೆಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ನಡೆಸಲಾಗುವುದಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ. 

ತಮ್ಮ 94 ನೇ ವಯಸ್ಸಿನಲ್ಲಿ, ಬಾದಲ್ ಅವರು 13 ನೇ ಬಾರಿಗೆ ಚುನಾವಣೆ ಸ್ಪರ್ಧಿಸಿದಾಗ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಿದ ದೇಶದ ಅತ್ಯಂತ ಹಿರಿಯ ಅಭ್ಯರ್ಥಿ ಎಂಬ ಕೀರ್ತಿಗೆ ಭಾಜನರಾಗಿದ್ದರು. ಆದರೆ ಮುಕ್ತಸರ್ ಜಿಲ್ಲೆಯ ಲಂಬಿಯಲ್ಲಿ ಅವರ ಗೆಲುವು ಸಾಧ್ಯವಾಗಲಿಲ್ಲ. ಅವರು ಸ್ಪರ್ಧಿಸಿದ 7 ಚುನಾವಣೆಗಳಲ್ಲಿ 5ರಲ್ಲಿ ಗೆದ್ದಿದ್ದು, 2 ಬಾರಿ ಸೋತಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com