ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಕುಸ್ತಿಪಟುಗಳ ಅರ್ಜಿ: ನೊಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್

ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುವಂತೆ ಕೋರಿ ಏಳು ಮಹಿಳಾ ಕುಸ್ತಿಪಟುಗಳ ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಪ್ರತಿಭಟನೆ ನಡೆಸಿದರು.
ಜಂತರ್ ಮಂತರ್‌ನಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್ ಪ್ರತಿಭಟನೆ ನಡೆಸಿದರು.

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡುವಂತೆ ಕೋರಿ ಏಳು ಮಹಿಳಾ ಕುಸ್ತಿಪಟುಗಳ ಸಲ್ಲಿಸಿರುವ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಅರ್ಜಿಯಲ್ಲಿ ಡಬ್ಲ್ಯುಎಫ್ಐ ಅಧ್ಯಕ್ಷರ ಮೇಲೆ ಗಂಭೀರ ಆರೋಪಗಳಿವೆ ಎಂದು ಗಮನಿಸಿದ ಸಿಜೆಐ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಜಿಎನ್‌ಸಿಟಿಡಿಯಿಂದ ಪ್ರತಿಕ್ರಿಯೆಯನ್ನು ಕೋರಿ ಇದೇ ಶುಕ್ರವಾರಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅರ್ಜಿದಾರರ ಗುರುತನ್ನು ಮರುರೂಪಿಸುವಂತೆಯೂ ನ್ಯಾಯಾಲಯ ಸೂಚಿಸಿದೆ.

ಕುಸ್ತಿಪಟುಗಳ ಪರ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಕ್ರಮ ಕೈಗೊಂಡಿಲ್ಲ. ಈ ರೀತಿಯ ಅಪರಾಧವನ್ನು ದಾಖಲಿಸದಿದ್ದಕ್ಕಾಗಿ ಪೊಲೀಸರ ವಿರುದ್ಧ ಕೂಡ ಕ್ರಮ ಕೈಗೊಳ್ಳಬಹುದು. ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ಇದುವರೆಗೆ ಯಾವುದೇ ಎಫ್ ಐಆರ್ ದಾಖಲಿಸಿಲ್ಲ ಎಂದು ಸಿಬಲ್ ಹೇಳಿದ್ದಾರೆ.

ಕಳೆದ ಜನವರಿಯಲ್ಲಿ ವಿನೇಶ್ ಫೋಗಟ್, ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಅನೇಕ ಹೆಸರಾಂತ ಭಾರತೀಯ ಕುಸ್ತಿಪಟುಗಳು ಶರಣ್ ಸಿಂಗ್ ಮತ್ತು ಡಬ್ಲ್ಯುಎಫ್‌ಐ ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಜನವರಿ 24 ರಂದು ಕುಸ್ತಿಪಟುಗಳನ್ನು ಭೇಟಿಯಾದ ನಂತರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಎಂಸಿ ಮೇರಿ ಕೋಮ್ ನೇತೃತ್ವದ ಮೇಲುಸ್ತುವಾರಿ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದರೂ, ಸಮಿತಿಯು ಡಬ್ಲ್ಯುಎಫ್‌ಐನ ದೈನಂದಿನ ಚಟುವಟಿಕೆಗಳನ್ನು ಮತ್ತು ಸಿಂಗ್ ವಿರುದ್ಧದ ಆರೋಪಗಳನ್ನು ಕಡೆಗಣಿಸಿದೆ. ಸಮಿತಿ ವರದಿ ನೀಡಿದ್ದರೂ ತ್ತು ಎಫ್‌ಐಆರ್ ದಾಖಲಿಸುವಲ್ಲಿ ದೆಹಲಿ ಪೊಲೀಸರ ನಿಷ್ಕ್ರಿಯತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಕಳೆದ ಭಾನುವಾರ ಧರಣಿ ಕುಳಿತರು.

ದೇಶದ ಏಳು ಅಗ್ರ ಕುಸ್ತಿಪಟುಗಳು, ಒಲಿಂಪಿಕ್ ಪದಕ ವಿಜೇತರು ಮತ್ತು ವಿಶ್ವ ಚಾಂಪಿಯನ್‌ಶಿಪ್ ಗಳು, ಅಪ್ರಾಪ್ತ ಕ್ರೀಡಾಪಟು ಸೇರಿದಂತೆ ಪದಕ ವಿಜೇತರು ದೂರು ದಾಖಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com