ದೆಹಲಿ: ಮೆಟ್ರೋ ರೈಲಿನಲ್ಲಿ ಯುವಕನ ಹಸ್ತ ಮೈಥುನದ ವಿಡಿಯೋ ವೈರಲ್; ಸ್ವಾತಿ ಮಲಿವಾಲ್ ಕಳವಳ

ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಮೆಟ್ರೊ ರೈಲಿನಲ್ಲಿ ಯುವಕನೊಬ್ಬ ಪ್ರಯಾಣಿಕರ ನಡುವೆಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಈ ವೇಳೆ ಸಾಕಷ್ಟು ಮಹಿಳಾ ಪ್ರಯಾಣಿಕರು ಇದ್ದರು ಎಂದು ಹಲವರು ದೂರಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ಈ ಸಂಬಂಧ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸ್ವಾತಿ ಮಲಿವಾಲ್ ಈ ನಾಚಿಕೆಗೇಡಿನ ಕೃತ್ಯಕ್ಕಾಗಿ ಪೊಲೀಸರು ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ದೆಹಲಿ ಮೆಟ್ರೊದಲ್ಲಿ ಯುವಕನೊಬ್ಬ ನಾಚಿಕೆಯಿಲ್ಲದೆ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ತುಂಬಾ ಅಸಹ್ಯಕರ, ನೋವಿನ ಸಂಗತಿ. ಆ ಯುವಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೊಗೆ ಸೂಚನೆ ನೀಡಿದ್ದೇನೆ ಎಂದು ಟ್ವಿಟರ್​​ನಲ್ಲಿ ಸ್ವಾತಿ ಮಲಿವಾಲ್ ತಿಳಿಸಿದ್ದಾರೆ.

ಈ ಘಟನೆ ಬಗ್ಗೆ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಹಲವರಿಗೆ ಮುಜುಗರ ಉಂಟಾಯಿತು ಎಂದು ಪ್ರಯಾಣಿಕರೊಬ್ಬರು ದೂರಿದ್ದಾರೆ. ಮೆಟ್ರೊದಲ್ಲೂ ಪೊಲೀಸರೊಬ್ಬರು ಬೇಕು ಎಂದು ಹಲವಾರು ಪ್ರಯಾಣಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಹೇಳಿಕೊಂಡಿದ್ದಾರೆ.

ಈ ಘಟನೆಯನ್ನು ಮತ್ತೊಬ್ಬ ಪ್ರಯಾಣಿಕರು ವಿಡಿಯೋ ಮಾಡಿದ್ದಾರೆ, ಆದರೆ ಅವರು ಆತನನ್ನು ತಡೆಯಲು ಮಧ್ಯಪ್ರವೇಶಿಸಲಿಲ್ಲ, ದೆಹಲಿ ಮೆಟ್ರೋ ರೈಲಿನಲ್ಲಿ ಇಂತಹ ಘಟನೆ ಇದೇ ಮೊದಲಲ್ಲ, ಇತ್ತೀಚಿಗೆ ಮಹಿಳೆಯೊಬ್ಬರು ಕೇವಲ ಬ್ರಾ ಮತ್ತು ಮಿನಿಸ್ಕರ್ಟ್‌ ಧರಿಸಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಹೀಗಾಗಿ ಸಾಮಾಜಿಕ ಶಿಷ್ಟಾಚಾರ ಮತ್ತು ಪ್ರೋಟೋಕಾಲ್‌ಗಳನ್ನು ಅನುಸರಿಸಲು DMRC ಪ್ರಯಾಣಿಕರನ್ನು ಒತ್ತಾಯಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com