ದ್ವೇಷ ಭಾಷಣ: ದೂರು ಬಾರದಿದ್ದರೂ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ; ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ದೂರಿಲ್ಲದೇ ಹೋದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ನೀಡಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ದೂರಿಲ್ಲದೇ ಹೋದರೂ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿ ಎಂದು ಸುಪ್ರೀಂ ಕೋರ್ಟ್ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

2022ರ ಆದೇಶದ ವ್ಯಾಪ್ತಿಯನ್ನು ಮೂರು ರಾಜ್ಯಗಳ ಆಚೆಗೂ ವಿಸ್ತರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಯಾವುದೇ ದೂರು ನೀಡದಿದ್ದರೂ ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು ದ್ವೇಷ ಭಾಷಣಗಳನ್ನು "ದೇಶದ ಜಾತ್ಯತೀತ ರಚನೆಯ ಮೇಲೆ ಪರಿಣಾಮ ಬೀರುವ ಗಂಭೀರ ಅಪರಾಧ" ಎಂದು ಬಣ್ಣಿಸಿದ್ದು, 2022 ರ ಅಕ್ಟೋಬರ್ 21 ರ ಆದೇಶವು ಧರ್ಮವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಮತ್ತು ಪ್ರಕರಣಗಳನ್ನು ದಾಖಲಿಸುವಲ್ಲಿ ಯಾವುದೇ ವಿಳಂಬವನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗುವುದು ಎಂದು ಪೀಠವು ಎಚ್ಚರಿಸಿದೆ.

"ಧರ್ಮದ ಹೆಸರಿನಲ್ಲಿ ನಾವು ಎಲ್ಲಿಗೆ ತಲುಪಿದ್ದೇವೆ? ನಾವು ಧರ್ಮವನ್ನು ಯಾವುದಕ್ಕೆ ಇಳಿಸಿದ್ದೇವೆ ಎಂಬುದು ನಿಜಕ್ಕೂ ದುರಂತ" ಎಂದ ಸುಪ್ರೀಂ ಕೋರ್ಟ್, ಭಾರತದ ಸಂವಿಧಾನವು ಜಾತ್ಯತೀತ ರಾಷ್ಟ್ರವನ್ನು ಕಲ್ಪಿಸುತ್ತದೆ. ದೂರು ದಾಖಲಾಗುವವರೆಗೆ ಕಾಯದೆ ಅಪರಾಧಿಗಳ ವಿರುದ್ಧ ತ್ವರಿತವಾಗಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸುವಂತೆ ಸೂಚಿಸಿದೆ. ಉತ್ತರ ಪ್ರದೇಶ, ದೆಹಲಿ ಮತ್ತು ಉತ್ತರಾಖಂಡ್‌ಗೆ ದ್ವೇಷದ ಭಾಷಣ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈ ಹಿಂದೆ ಸೂಚಿಸಿತ್ತು. ಆದರೆ ಇದೀಗ ಈ ಆದೇಶವನ್ನು ಈ ಮೂರು ರಾಜ್ಯಗಳು ಮಾತ್ರವಲ್ಲದೇ ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೂ ವಿಸ್ತರಿಸಿದೆ.

"ದ್ವೇಷ ಭಾಷಣ ಮಾಡುವಾತನ ಜಾತಿ, ಸಮುದಾಯ, ಧರ್ಮ ಯಾವುದೇ ಇದ್ದರೂ ಕಾನೂನು ಮುರಿಯಲು ಯಾರಿಗೂ ಅವಕಾಶ ನೀಡಲು ಸಾಧ್ಯವಿಲ್ಲ" ಎಂದು ಕೋರ್ಟ್ ಹೇಳಿದೆ. "ದ್ವೇಷ ಭಾಷಣ ಮಾಡುವಾತನ ಧರ್ಮ ಯಾವುದೇ ಇದ್ದರೂ ಕ್ರಮ ಕೈಗೊಳ್ಳಬೇಕು ಎಂದು ನಾವು ಸ್ಪಷ್ಟವಾಗಿ ಹೇಳುತ್ತೇವೆ. ಇದರಿಂದ ಸಂವಿಧಾನದ ಪ್ರಸ್ತಾವನೆಯಲ್ಲಿ ಉಲ್ಲೇಖಿಸಲಾಗಿರುವ ಭಾರತದ ಜಾತ್ಯತೀತದ ಗುಣವನ್ನು ಕಾಪಾಡಬಹುದು" ಎಂದು ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನು ಒಳಗೊಂಡ ಪೀಠ ಶುಕ್ರವಾರ ಹೇಳಿದೆ.

ದ್ವೇಷ ಭಾಷಣ ಅಪರಾಧಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ದ್ವೇಷದ ಭಾಷಣಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ಕುರಿತು ಪೀಠವು ಈ ಹಿಂದೆ ಮಹಾರಾಷ್ಟ್ರ ರಾಜ್ಯದಿಂದ ಪ್ರತಿಕ್ರಿಯೆ ಕೇಳಿತ್ತು. ದ್ವೇಷ ಭಾಷಣ ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ಎಫ್‌ಐಆರ್ ದಾಖಲಿಸಲು ಅಅಕ್ಟೋಬರ್ 21, 2022 ರಂದು ರಲ್ಲಿ ಸುಪ್ರೀಂಕೋರ್ಟ್ ನೀಡಿದ ಆದೇಶವನ್ನು ಉತ್ತರಪ್ರದೇಶ, ದೆಹಲಿ ಮತ್ತು ಉತ್ತರಾಖಂಡ ಸರ್ಕಾರಗಳಿಗೆ ಮಾತ್ರ ಅನ್ವಯಿಸಲಾಗಿತ್ತು.

ಯಾರೇ ಈ ರೀತಿ ಹೇಳಲಿ ಧರ್ಮವನ್ನು ಲೆಕ್ಕಿಸದೆ ಅಂತಹ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ನಾವು ಮತ್ತಷ್ಟು ಸ್ಪಷ್ಟಪಡಿಸುತೇವೆ ಇದರಿಂದಾಗಿ ಪೀಠಿಕೆಯಿಂದ ಕಲ್ಪಿಸಲ್ಪಟ್ಟಿರುವ ಭಾರತದ ಜಾತ್ಯತೀತ ಪಾತ್ರವನ್ನು ಸಂರಕ್ಷಿಸಲಾಗಿದ ಎಂದು ಪೀಠ ತನ್ನ ಆದೇಶದಲ್ಲಿ ಹೇಳಿದೆ. ಮುಂದಿನ ವಿಚಾರಣೆಯನ್ನು ಮೇ 12ಕ್ಕೆ ನಿಗದಿಗೊಳಿಸಿದೆ.

ಪ್ರತಿ ರಾಜ್ಯದಲ್ಲಿಯೂ ನೋಡಲ್ ಅಧಿಕಾರಿಯನ್ನು ನೇಮಿಸಬೇಕು ಎಂದು ಅರ್ಜಿದಾರರು ಕೋರಿದ್ದರು. ಆದರೆ ನ್ಯಾಯಪೀಠವು ಪ್ರತಿ ಜಿಲ್ಲೆಯಲ್ಲಿಯೂ ನೋಡಲ್ ಅಧಿಕಾರಿ ನೇಮಕ ಮಾಡಲು ಸಲಹೆ ನೀಡಿದೆ. ಸಾಮಾಜಿಕ ಮಾಧ್ಯಮದಿಂದ ದ್ವೇಷ ಭಾಷಣಗಳನ್ನು ತೆರವುಗೊಳಿಸಲು ಕೂಡ ಸೂಕ್ತ ವಿಧಾನ ರೂಪಿಸುವ ಅಗತ್ಯವಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.

ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಅರ್ಜಿಯೊಂದು ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನ್ಯಾಯಮೂರ್ತಿ ಕೆಎಂ ಜೋಸೆಫ್, ಕೇಂದ್ರ ಸಚಿವರ ವಿರುದ್ಧ ಎಫ್‌ಐಆರ್ ದಾಖಲಿಸಲು ವಾಗ್ದಂಡನೆ ಅಗತ್ಯವಾಗಿದೆ ಎಂದು ಮ್ಯಾಜಿಸ್ಟ್ರೇಟ್ ಹೇಳಿದೆ. 156 (3)ಗೆ ವಾಗ್ದಂಡನೆ ಅಗತ್ಯವಾಗಿದೆ ಎಂದು ಹೈಕೋರ್ಟ್ ಕೂಡ ಅಭಿಪ್ರಾಯಪಟ್ಟಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com