ಪ್ರಕಾಶ್ ಸಿಂಗ್ ಬಾದಲ್, ಪುತ್ರ ಸುಖ್ಬೀರ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಎರಡು ದಿನಗಳ ಹಿಂದೆ ನಿಧನರಾದ ಶಿರೋಮಣಿ ಅಕಾಲಿದಳ(ಎಸ್‌ಎಡಿ)ದ ವರಿಷ್ಠ, ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಅವರ ಪುತ್ರ ಸುಖ್‌ಬೀರ್ ಸಿಂಗ್ ಬಾದಲ್ ವಿರುದ್ಧದ ಕ್ರಿಮಿನಲ್ ಕೇಸ್ ಗಳನ್ನು ಸುಪ್ರೀಂ ಕೋರ್ಟ್...
ಪ್ರಕಾಶ್ ಸಿಂಗ್ ಬಾದಲ್
ಪ್ರಕಾಶ್ ಸಿಂಗ್ ಬಾದಲ್

ನವದೆಹಲಿ: ಎರಡು ದಿನಗಳ ಹಿಂದೆ ನಿಧನರಾದ ಶಿರೋಮಣಿ ಅಕಾಲಿದಳ(ಎಸ್‌ಎಡಿ)ದ ವರಿಷ್ಠ, ಪಂಜಾಬ್ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಮತ್ತು ಅವರ ಪುತ್ರ ಸುಖ್‌ಬೀರ್ ಸಿಂಗ್ ಬಾದಲ್ ವಿರುದ್ಧದ ಕ್ರಿಮಿನಲ್ ಕೇಸ್ ಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಫೋರ್ಜರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಇಬ್ಬರು ನಾಯಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿತ್ತು. ಈ ಸಂಬಂಧ ಪಂಜಾಬ್‌ನ ಹೋಶಿಯಾರ್‌ಪುರ ವಿಚಾರಣಾ ನ್ಯಾಯಾಲಯ, ಆರೋಪಿಗಳಿಗೆ ಸಮನ್ಸ್ ನೀಡಿತ್ತು.

ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮತ್ತು ತಮ್ಮ ವಿರುದ್ಧದ ಕೇಸ್ ರದ್ದು ಕೋರಿ ಬಾದಲ್ಸ್ ಮತ್ತು ಎಸ್ ಎಡಿ ಹಿರಿಯ ನಾಯಕ ದಲ್ಜಿತ್ ಸಿಂಗ್ ಚೀಮಾ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರ ಪೀಠ ಏಪ್ರಿಲ್ 11 ರಂದು ತೀರ್ಪು ಕಾಯ್ದಿರಿಸಿತ್ತು.

ಇಂದು ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್, ಪ್ರಕಾಶ್ ಸಿಂಗ್ ಬಾದಲ್ ಮತ್ತು ಅವರ ಪುತ್ರ ಸುಖ್ಬೀರ್ ಸಿಂಗ್ ವಿರುದ್ಧದ ಕ್ರಿಮಿನಲ್ ಕೇಸ್ ರದ್ದುಗೊಳಿಸಿದೆ. ಅಲ್ಲದೆ ವಿಚಾರಣಾ ನ್ಯಾಯಾಲಯ ನೀಡಿದ ಸಮನ್ಸ್ ಆದೇಶ ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಹೇಳಿದೆ.

95 ವರ್ಷದ ಪ್ರಕಾಶ್ ಸಿಂಗ್ ಬಾದಲ್ ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com