ಒಂದೇ ವೇದಿಕೆಯಲ್ಲಿ ಪವಾರ್ -ಮೋದಿ: ಗೊಂದಲ ನಿವಾರಿಸಬೇಕು ಎಂದ ಶಿವಸೇನೆ; ಸ್ಮರಣೀಯ ಕ್ಷಣ ಎಂದ ಪ್ರಧಾನಿ!

ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು “ಇಂಡಿಯಾ” ಮೈತ್ರಿಕೂಟ ರಚಿಸಿಕೊಂಡು ಪ್ರಧಾನಿ ಮೋದಿ ಅವರ ವಿರುದ್ದ ಸಮರ ಸಾರಿರುವ ನಡುವೆಯೇ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ಮುಖ್ಯಸ್ಥೆ ಶರದ್ ಪವಾರ್, ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ವೇದಿಕೆಯಲ್ಲಿ ಪ್ರಧಾನಿ ಮೋದಿ ಮತ್ತು ಶರದ್ ಪವಾರ್
ವೇದಿಕೆಯಲ್ಲಿ ಪ್ರಧಾನಿ ಮೋದಿ ಮತ್ತು ಶರದ್ ಪವಾರ್

ಪುಣೆ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು “ಇಂಡಿಯಾ” ಮೈತ್ರಿಕೂಟ ರಚಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ದ ಸಮರ ಸಾರಿರುವ ನಡುವೆಯೇ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎನ್‌ಸಿಪಿ ಮುಖ್ಯಸ್ಥೆ ಶರದ್ ಪವಾರ್, ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ 103ನೇ ಪುಣ್ಯತಿಥಿಯ ಅಂಗವಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ಸ್ವೀಕಾರ ಸಮಾರಂಭದಲ್ಲಿ ಶರದ್ ಪವಾರ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು. ಪವಾರ್ ಅವರ ಈ ನಡೆ ಕುತೂಹಲ ಕೆರಳಿಸಿದೆ.

ಸ್ಮರಣೀಯ ಕ್ಷಣ: ಪ್ರಧಾನಿ ಮೋದಿ
ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ, “ಇದು ನನಗೆ ಸ್ಮರಣೀಯ ಕ್ಷಣ” ಎಂದು ಹೇಳಿದ್ದಾರೆ ಅಲ್ಲದೆ ಶರದ್ ಪವಾರ್ ಅವರೊಂದಿಗೆ ಮುಕ್ತ ಸಂವಾದವನ್ನೂ ನಡೆಸಿದರು.

ಪ್ರಧಾನಿ ವಿರುದ್ದ ಪ್ರತಿಭಟನೆ
ಕೆಲವು ಸಾಮಾಜಿಕ ಸಂಘಟನೆಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಜಂಟಿ ಪ್ರತಿಭಟನೆ ನಡೆಸಿದರು. ಪ್ರಮುಖ ಸಾಮಾಜಿಕ ಕಾರ್ಯಕರ್ತ ಬಾಬಾ ಅಧವ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನೆ ವೇಳೆ ಕಾಂಗ್ರೆಸ್, ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಗೊಂದಲ ನಿವಾರಿಸಬೇಕು ಎಂದ ಶಿವಸೇನೆ
“ಮಹಾ ವಿಕಾಸ್ ಅಘಾಡಿ ಅಥವಾ ಇಂಡಿಯಾ ನಾಯಕರು ಇಂತಹ ಕಾರ್ಯಕ್ರಮಗಳಿಗೆ ಹೋದಾಗ, ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಯಾಗುತ್ತದೆ… ಇಂಡಿಯಾ ಒಕ್ಕೂಟದ ಸದಸ್ಯರಲ್ಲಿರುವ ಗೊಂದಲ ನಿವಾರಿಸಬೇಕು. ಆದರೆ ನಾವು ಒಟ್ಟಿಗೆ ಇದ್ದೇವೆ, ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಹೇಳಿದ್ದಾರೆ. 

ಸಾಮ್ನಾದಲ್ಲೂ ಕಿಡಿ
ಶಿವಸೇನಾ (ಯುಬಿಟಿ) ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ ಪ್ರಧಾನಿ ಮೋದಿ ಅವರು ಎನ್ ಸಿಪಿ ಪಕ್ಷದ ವಿರುದ್ದ ಭ್ರಷ್ಟಾಚಾರದ ಆರೋಪದ ಮೇಲೆ ಆರೋಪಿಸಿದರು ಮತ್ತು ನಂತರ ಪಕ್ಷದಲ್ಲಿ ಒಡಕು ಮೂಡಿಸಿದರು ಮತ್ತು ಮಹಾರಾಷ್ಟ್ರದ ರಾಜಕೀಯ ಕೆಸರೆರಚಿ ಅವರ ಜೊತೆಯೇ ಸರ್ಕಾರ ರಚಿಸಿದ್ದಾರೆ ಎಂದು ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com