ಶಾಲೆಯಲ್ಲೇ 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಾಂಶುಪಾಲ, ಇಬ್ಬರು ಶಿಕ್ಷಕರು ಸೇರಿ ನಾಲ್ವರ ಬಂಧನ

ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶಾಲೆಯಲ್ಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರಕೂಟ: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶಾಲೆಯಲ್ಲೇ 17 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

10ನೇ ತರಗತಿಯ ವಿದ್ಯಾರ್ಥಿನಿ ಮೇಲೆ ಕಳೆದ ಐದು ತಿಂಗಳಲ್ಲಿ ಶಾಲೆಯೊಳಗೆ ಹಲವಾರು ಬಾರಿ ಶಿಕ್ಷಕರು ಮತ್ತು ಪ್ರಾಂಶುಪಾಲರು ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ವೃಂದಾ ಶುಕ್ಲಾ ಅವರು ಹೇಳಿದ್ದಾರೆ.

ಈ ಸಂಬಂಧ ಜುಲೈ 26 ರಂದು ಎಫ್‌ಐಆರ್ ದಾಖಲಿಸಲಾಗಿದ್ದು, ವಿಚಾರಣೆ ನಂತರ ಪೊಲೀಸರು ಆರೋಪಿಗಳಾದ ಇರ್ಷಾದ್, ಮುಯಿನ್ ಮತ್ತು ಆದಿತ್ಯನನ್ನು ಬಂಧಿಸಿದ್ದಾರೆ.

ಸಂಚು ರೂಪಿಸಿ ಬಾಲಕಿಯನ್ನು ಶಿಕ್ಷಕರ ಬಳಿ ಕರೆದೊಯ್ದ ಆರೋಪ ಮೇಲೆ ಬಾಲಕಿಯ ಸೋದರ ಸಂಬಂಧಿಯನ್ನು ಕೂಡ ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com