ಮಣಿಪುರ ಹಿಂಸಾಚಾರ: 14,000ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಸ್ಥಳಾಂತರಗೊಂಡಿದ್ದಾರೆ; ಶಿಕ್ಷಣ ಸಚಿವಾಲಯ ಮಾಹಿತಿ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ 14,000ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಥಳಾಂತರಗೊಂಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
ಹಿಂಸಾಚಾರದಲ್ಲಿ ಮಡಿದವರು
ಹಿಂಸಾಚಾರದಲ್ಲಿ ಮಡಿದವರು

ನವದೆಹಲಿ: ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ 14,000ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಥಳಾಂತರಗೊಂಡಿದ್ದಾರೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬುಧವಾರ ರಾಜ್ಯಸಭೆಗೆ ತಿಳಿಸಿದೆ. 

ಈ ಪೈಕಿ ಶೇಕಡಾ 93ರಷ್ಟು ಮಕ್ಕಳು ಹತ್ತಿರದ ಶಾಲೆಗೆ ದಾಖಲಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವೆ ಅನ್ನಪೂರ್ಣ ದೇವಿ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಮಣಿಪುರದಲ್ಲಿ ಪ್ರಸ್ತುತ ಪರಿಸ್ಥಿತಿಯಿಂದಾಗಿ ಒಟ್ಟು 14,763 ಶಾಲೆಗೆ ಹೋಗುವ ಮಕ್ಕಳು ಸ್ಥಳಾಂತರಗೊಂಡಿದ್ದಾರೆ. ನಿರಾಶ್ರಿತ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅನುಕೂಲವಾಗುವಂತೆ ಪ್ರತಿ ಪರಿಹಾರ ಶಿಬಿರಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಅವರು ಹೇಳಿದರು. 93.5 ಶೇಕಡಾ ಸ್ಥಳಾಂತರಗೊಂಡ ವಿದ್ಯಾರ್ಥಿಗಳನ್ನು ಹತ್ತಿರದ ಸಾಧ್ಯವಾದಷ್ಟು ಶಾಲೆಯಲ್ಲಿ ಉಚಿತವಾಗಿ ಸೇರಿಸಿಕೊಳ್ಳಲಾಗಿದೆ ಎಂದರು.

ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ 160ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ, ಪರಿಶಿಷ್ಟ ಪಂಗಡ (ST) ಸ್ಥಾನಮಾನಕ್ಕಾಗಿ ಮೀತಿ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಬೆಟ್ಟದ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಲಾಗಿತ್ತು. ಆನಂತರ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com