'ಮಂದಿರವಾಗಲಿ ಅಥವಾ ಮಸೀದಿಯಾಗಲಿ, ದೇವರು ಒಬ್ಬನೇ': ಜ್ಞಾನವಾಪಿ ಸರ್ವೆಗೆ ಕೋರ್ಟ್ ಅನುಮತಿ ಕುರಿತು ಫಾರೂಕ್ ಅಬ್ದುಲ್ಲಾ!

ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಫಾರೂಕ್ ಅಬ್ದುಲ್ಲಾ
ಫಾರೂಕ್ ಅಬ್ದುಲ್ಲಾ
Updated on

ನವದೆಹಲಿ: ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಅವರಣದಲ್ಲಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯ ಸಂಸತ್ ಆವರಣದಲ್ಲಿ ಪ್ರತಿಕ್ರಿಯೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, 'ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ..  ನೀವು ಅವನನ್ನು (ದೇವರು) ಮಂದಿರ ಅಥವಾ ಮಸೀದಿ ಒಂದು ಸ್ಥಳದಲ್ಲಿ ನೋಡಬಹುದು ಎಂದು ಹೇಳಿದ್ದಾರೆ.

Places of Worship Act ಜಾರಿಗೊಳಿಸಿ: ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಆಗ್ರಹ
ಇನ್ನು ಹೈಕೋರ್ಟ್ ಆದೇಶಕ್ಕೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ (All India Muslim Personal Law Board) ಪ್ರಕರಣಕ್ಕೆ ಸಂಬಂಧಿಸಿದಂತೆ Places of Worship Act ಜಾರಿಗೊಳಿಸಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಎಐಎಂಪಿಎಲ್‌ಬಿ ಸದಸ್ಯ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಅವರು, “ಈ ಮಸೀದಿಯು ಸುಮಾರು 600 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಕಳೆದ 600 ವರ್ಷಗಳಿಂದ ಮುಸ್ಲಿಮರು ಇಲ್ಲಿ ನಮಾಜ್ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ Places of Worship Act ಜಾರಿಗೊಳಿಸಬೇಕು. ಮುಸ್ಲಿಮರು ಶತಮಾನಗಳಿಂದ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ. ಈ ಆದೇಶವನ್ನು ಪ್ರಶ್ನಿಸಿ ಎಸ್‌ಸಿಯನ್ನು ಸಂಪರ್ಕಿಸುವ ಬಗ್ಗೆ ಮುಸ್ಲಿಂ ಕಡೆಯವರು ಯೋಚಿಸುತ್ತಾರೆ ಎಂದು ಹೇಳಿದ್ದಾರೆ.

ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್‌ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್​ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com