ಖರ್ಗೆ ಸಮ್ಮುಖದಲ್ಲಿ ಬಿಆರ್ ಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ!

ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಬಿಆರ್ ಎಸ್ ನಾಯಕರು
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಬಿಆರ್ ಎಸ್ ನಾಯಕರು

ನವದೆಹಲಿ:  ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ, ಎಐಸಿಸಿ ರಾಜ್ಯ ಉಸ್ತುವಾರಿ ಮಾಣಿಕ್ ರಾವ್ ಠಾಕ್ರೆ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. 

ಈ ವರ್ಷಾಂತ್ಯದಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಾಯಕರ ಸೇರ್ಪಡೆಯಿಂದಾಗಿ ಕಾಂಗ್ರೆಸ್‌ಗೆ ಸ್ವಲ್ಪ ಬಲ ಬದಂತಾಗಿದೆ. ಕೆ.ಚಂದ್ರಶೇಖರ ರಾವ್ ನೇತೃತ್ವದ ಸರ್ಕಾರಕ್ಕೆ ತೀವ್ರ ಸವಾಲು ಒಡ್ಡಲು ಮತ್ತು ಅದನ್ನು ಅಧಿಕಾರದಿಂದ ಕಿತ್ತೊಗೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.

ಈ ಕುರಿತು ಟ್ವೀಟ್ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷಕ್ಕೆ ತೆಲಂಗಾಣದ ಹಲವು ಪ್ರಮುಖ ನಾಯಕರನ್ನು ಸ್ವಾಗತಿಸುತ್ತೇವೆ. ತೆಲಂಗಾಣದ ಪ್ರಗತಿ ಮತ್ತು ಸಮೃದ್ಧಿಗಾಗಿ ಆ ರಾಜ್ಯದ ಜನರು ಕಾಂಗ್ರೆಸ್ ಸರ್ಕಾರ ಚುಕ್ಕಾಣಿ ಹಿಡಿಯಲು ಬಯಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com