ಕಾಶ್ಮೀರ: ಕುಲ್ಗಾಮ್‌ನಲ್ಲಿ ಉಗ್ರರೊಂದಿಗೆ ಎನ್‌ಕೌಂಟರ್‌; ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಿತ್ರ
ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯದ ಎತ್ತರದ ಪ್ರದೇಶದಲ್ಲಿ ಈ ಎನ್‌ಕೌಂಟರ್ ನಡೆದಿದೆ ಎಂದು ಅವರು ಹೇಳಿದ್ದಾರೆ.

"ಎನ್‌ಕೌಂಟರ್‌ನಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಈ ಪ್ರದೇಶದಲ್ಲಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com