ಆರ್ಟಿಕಲ್ 370 ರದ್ದತಿಯ 4ನೇ ವಾರ್ಷಿಕೋತ್ಸವ: ನಾಳೆ ಅಮರನಾಥ ಯಾತ್ರೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದತಿಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಜಮ್ಮು ಮೂಲ ಶಿಬಿರದಿಂದ ಅಮರನಾಥ ಯಾತ್ರೆಯನ್ನು...
ಅಮರನಾಥ ಯಾತ್ರೆ
ಅಮರನಾಥ ಯಾತ್ರೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದತಿಯ ನಾಲ್ಕನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಜಮ್ಮು ಮೂಲ ಶಿಬಿರದಿಂದ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಮರನಾಥ ಯಾತ್ರೆಯನ್ನು ನಾಳೆ(ಶನಿವಾರ) ಸ್ಥಗಿತಗೊಳಿಸಲಾಗುವುದು ಎಂದು ಜಮ್ಮು ಉಪ ಆಯುಕ್ತ ಅವ್ನಿ ಲವಾಸಾ ಅವರು ತಿಳಿಸಿದ್ದಾರೆ.

1,181 ಯಾತ್ರಾರ್ಥಿಗಳೊಂದಿಗೆ ಅಮರನಾಥ ಯಾತ್ರಿಗಳ 33ನೇ ಬ್ಯಾಚ್ ಶುಕ್ರವಾರ ಇಲ್ಲಿನ ಬೇಸ್ ಕ್ಯಾಂಪ್‌ನಿಂದ ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಪವಿತ್ರ ಗುಹೆ ದೇಗುಲಕ್ಕೆ ಬಿಗಿ ಭದ್ರತೆಯೊಂದಿಗೆ ಹೊರಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆದರೆ ನಾಳೆ ಆರ್ಟಿಕಲ್ 370 ರದ್ದತಿಯ ನಾಲ್ಕನೇ ವಾರ್ಷಿಕೋತ್ಸವದ ಕಾರಣ, ನಗರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370 ಮತ್ತು 35 ಎ ವಿಧಿಗಳನ್ನು ಕೇಂದ್ರ ಸರ್ಕಾರ ಆಗಸ್ಟ್ 5, 2019 ರಂದು ರದ್ದುಗೊಳಿಸಿತು ಮತ್ತು ಕಣಿವೆ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com