ಜ್ಞಾನವಾಪಿ ಮಂದಿರವೋ ಅಥವಾ ಮಸೀದಿಯೋ?: ಬಿಗಿ ಭದ್ರತೆ ನಡುವೆ ASI ಸಮೀಕ್ಷೆ ಆರಂಭ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತೆಯ ನಡುವೆ ವೈಜ್ಞಾನಿಕ ಸಮೀಕ್ಷೆಯನ್ನು ಆರಂಭಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ವಾರಣಾಸಿ: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಶುಕ್ರವಾರ ಬೆಳಗ್ಗೆ ಉತ್ತರ ಪ್ರದೇಶದ ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣಕ್ಕೆ ಭೇಟಿ ನೀಡಿದ್ದು, ಬಿಗಿ ಭದ್ರತೆಯ ನಡುವೆ ವೈಜ್ಞಾನಿಕ ಸಮೀಕ್ಷೆಯನ್ನು ಆರಂಭಿಸಿದೆ.

ವಾರಾಣಸಿಯ ಜ್ಞಾನವಾಪಿ ಮಸೀದಿ ಆವರಣದಲ್ಲಿ ಸಮೀಕ್ಷೆ ನಡೆಸಲು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು.

ಮಸೀದಿ ಆವರಣದಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಜುಲೈ 21ರಂದು ವಾರಾಣಸಿ ಜಿಲ್ಲಾ ನ್ಯಾಯಾಧೀಶರು ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಅಂಜುಮನ್ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ವಿವಾದಾತ್ಮಕ ಮಸೀದಿಯನ್ನು ಹಿಂದೂ ದೇವಸ್ಥಾನವೊಂದನ್ನು ಉರುಳಿಸಿ ಕಟ್ಟಲಾಗಿದೆ ಎಂದು ಪ್ರತಿಪಾದಿಸಿರುವ ನಾಲ್ವರು ಹಿಂದೂ ಮಹಿಳೆಯರು, ಅದನ್ನು ಸಾಬೀತುಪಡಿಸಲು ಸಂಶೋಧನೆ ನಡೆಸಬೇಕು ಎಂದು ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು.

ಮಹಿಳೆಯರ ಅರ್ಜಿಯನ್ನು ಅನುಮೋದಿಸಿದ್ದ ವಾರಾಣಸಿ ಜಿಲ್ಲಾ ನ್ಯಾಯಾಲಯವು ಕಾರ್ಬನ್ ಡೇಟಿಂಗ್ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ಸೂಚನೆ ನೀಡಿತ್ತು. ಅದರ ವಿರುದ್ಧ ಅಂಜುಮನ್ ಇಂತೇಜಮಿಯಾ ಮಸೀದಿ ಸಮಿತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್, ತಕ್ಷಣದಿಂದಲೇ ಸಮೀಕ್ಷೆ ಮುಂದುವರಿಸಲು ಅನುಮತಿ ನೀಡಿತ್ತು.

ನ್ಯಾಯದಾನದ ಹಿತಾಸಕ್ತಿ ದೃಷ್ಟಿಯಿಂದ ಎಎಸ್‌ಐ ಸಮೀಕ್ಷೆ ಅಗತ್ಯವಾಗಿದೆ. ಇದನ್ನು ಕೆಲವು ಷರತ್ತುಗಳ ಅಡಿಯಲ್ಲಿ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ತಿಳಿಸಿತ್ತು.

ಎಎಸ್‌ಐ ಅಧಿಕಾರಿಗಳು ಸೇರಿದಂತೆ ಇತರರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈಗಾಗಲೇ ಸಮೀಕ್ಷೆ ಪ್ರಾರಂಬವಾಗಿದೆ. ನಾವೂ ಕೂಡ ಒಳಗೆ ಹೋಗುತ್ತಿದ್ದೇವೆಂದು. ಜ್ಞಾನವಾಪಿ ಪ್ರಕರಣದ ಹಿಂದೂ ಪರ ವಕೀಲ ಸುಭಾಷ್ ನಂದನ್ ಚತುರ್ವೇದಿ ಅವರು ತಿಳಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com