1984 ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ನಿರೀಕ್ಷಣಾ ಜಾಮೀನು, ದೇಶ ತೊರೆಯದಂತೆ ಷರತ್ತು!

1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ದೆಹಲಿ ನ್ಯಾಯಾಲಯವು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಜಗದೀಶ್ ಟೈಟ್ಲರ್
ಜಗದೀಶ್ ಟೈಟ್ಲರ್

ನವದೆಹಲಿ: 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ನಡೆದ ಪುಲ್ ಬಂಗಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್‌ಗೆ ದೆಹಲಿ ನ್ಯಾಯಾಲಯವು ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಟೈಟ್ಲರ್‌ಗೆ ಕೆಲವು ಷರತ್ತುಗಳನ್ನು ವಿಧಿಸಿದೆ.

ಇದರೊಂದಿಗೆ ಅವರು ಅನುಮತಿಯಿಲ್ಲದೆ ದೇಶವನ್ನು ತೊರೆಯುವಂತಿಲ್ಲ. ಪುಲ್ ಬಂಗಾಶ್ ಗುರುದ್ವಾರ ಹಿಂಸಾಚಾರ ಪ್ರಕರಣದ ಆರೋಪಿ ಜಗದೀಶ್ ಟೈಟ್ಲರ್ ಅವರ ನಿರೀಕ್ಷಣಾ ಜಾಮೀನಿನ ತೀರ್ಪನ್ನು ಆಗಸ್ಟ್ 2ರಂದು ನ್ಯಾಯಾಲಯವು ಕಾಯ್ದಿರಿಸಿತ್ತು. ಇನ್ನು ವಿಚಾರಣೆ ವೇಳೆ ಅವರಿಗೆ ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ತಿಳಿಸಿತ್ತು.

ಆಗಸ್ಟ್ 2ರಂದು ಜಗದೀಶ್ ಟೈಟ್ಲರ್ ಪರ ವಕೀಲರು ಟೈಟ್ಲರ್ ಯಾವುದೇ ತನಿಖಾ ಸಂಸ್ಥೆ ಅಥವಾ ಆಯೋಗದ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಲಿಲ್ಲ ಎಂದು ಹೇಳಿದರು. ಟೈಟ್ಲರ್ ವಿರುದ್ಧ ಅಂತಹ ಯಾವುದೇ ದೂರು ಬಂದಿಲ್ಲ. ಇದರಿಂದ ಕಕ್ಷಿದಾರನ ರಾಜಕೀಯ ಜೀವನವೇ ಹಾಳಾಗಿದೆ ಎಂದರು.

1984ರ ನವೆಂಬರ್ 1ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಸಿಖ್ ಅಂಗರಕ್ಷಕರಿಂದ ಹತ್ಯೆಯಾದ ಒಂದು ದಿನದ ನಂತರ, ಮೂವರನ್ನು ಹತ್ಯೆ ಮಾಡಲಾಗಿತ್ತು. ಅಲ್ಲದೆ ಪುಲ್ ಬಂಗಾಶ್ ಪ್ರದೇಶದಲ್ಲಿ ಗುರುದ್ವಾರಕ್ಕೆ ಬೆಂಕಿ ಹಚ್ಚಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com