ಇಂಜಿನ್ ದೋಷ: ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 
ಇಂಡಿಗೋ ವಿಮಾನ
ಇಂಡಿಗೋ ವಿಮಾನ

ಪಾಟ್ನಾ: ದೆಹಲಿಯಿಂದ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಬಿಹಾರದ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. 

ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಇಂಡಿಗೋ ಫ್ಲೈಟ್ - 6E 2433 ದೆಹಲಿಗೆ ಹೊರಟಿದ್ದು, ಇಂಜಿನ್ ನಿಷ್ಕ್ರಿಯವಾಗಿದೆ ಎಂದು ಮಾಹಿತಿ ಬಂದ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 9:11 AM ಕ್ಕೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಇಂಡಿಗೋ ವಿಮಾನ 6E 2433 ದೆಹಲಿಗೆ, ಪಾಟ್ನಾ ವಿಮಾನ ನಿಲ್ದಾಣದಿಂದ ನಿರ್ಗಮಿಸಿದ ಮೂರು ನಿಮಿಷಗಳ ನಂತರ ಒಂದು ಇಂಜಿನ್ ನಿಷ್ಕ್ರಿಯವಾಗಿದೆ. ವಿಮಾನವು  ಇಂದು ಬೆಳಗ್ಗೆ 9.11 ಗಂಟೆಗೆ ಸುರಕ್ಷಿತವಾಗಿ ಇಳಿಯಿತು. ವಿಮಾನ ನಿಲ್ದಾಣದಲ್ಲಿ ಎಲ್ಲಾ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

ಕಳೆದ ತಿಂಗಳು ಜುಲೈನಲ್ಲಿ, ಏರ್ ಇಂಡಿಯಾದ ದೆಹಲಿ-ಪ್ಯಾರಿಸ್ ವಿಮಾನವು ಟೇಕ್-ಆಫ್ ಆದ ಸ್ವಲ್ಪ ಸಮಯದ ನಂತರ ಇಂದಿರಾ ಗಾಂಧಿ ಇಂಟರ್ನ್ಯಾಷನಲ್ (IGI) ವಿಮಾನ ನಿಲ್ದಾಣದಲ್ಲಿ ಇಳಿದಿತ್ತು. ದೆಹಲಿ ಏರ್ ಟ್ರಾಫಿಕ್ ಕಂಟ್ರೋಲರ್‌ಗಳು ಅದರ ನಿರ್ಗಮನದ ನಂತರ ರನ್‌ವೇಯಲ್ಲಿ ಕಂಡುಬಂದ ಶಂಕಿತ ಟೈರ್ ಅವಶೇಷಗಳ ಬಗ್ಗೆ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿ ತುರ್ತು ಭೂಸ್ಪರ್ಶ ನಡೆಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com