ಹರಿಯಾಣ: ಹಿಂಸಾಚಾರದ ವೇಳೆ ರಜೆಯಲ್ಲಿದ್ದ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ವರ್ಗಾವಣೆ

ಜಿಲ್ಲೆಯಲ್ಲಿ ಕೋಮು ಘರ್ಷಣೆ ನಡೆದಾಗ ರಜೆಯಲ್ಲಿದ್ದ ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಂಡೀಗಢ: ಜಿಲ್ಲೆಯಲ್ಲಿ ಕೋಮು ಘರ್ಷಣೆ ನಡೆದಾಗ ರಜೆಯಲ್ಲಿದ್ದ ನುಹ್ ಪೊಲೀಸ್ ವರಿಷ್ಠಾಧಿಕಾರಿ ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ವಿಶ್ವ ಹಿಂದೂ ಪರಿಷತ್ ರ್ಯಾಲಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದ ಸಂದರ್ಭದಲ್ಲಿ ಹಿರಿಯ ಅಧಿಕಾರಿ ರಜೆಯಲ್ಲಿದ್ದರು ಎಂಬ ವಿಚಾರ ಬೆಳಕಿಗೆ ಬಂದಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿರುವ ಹರಿಯಾಣ ಸರ್ಕಾರ, ವರುಣ್ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿದೆ. ಎಸ್ಪಿ ಸಿಂಗ್ಲಾ ಅವರನ್ನು ವರ್ಗಾವಣೆ ಮಾಡಿ ಭಿವಾನಿ ಎಸ್ಪಿಯಾಗಿ ನಿಯೋಜಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಐಪಿಎಸ್ ಅಧಿಕಾರಿ ನರೇಂದ್ರ ಬಿಜರ್ನಿಯಾ ಅವರಿಗೆ ನುಹ್ ನ ಹೆಚ್ಚುವರಿ ಉಸ್ತುವಾರಿಯನ್ನು ವಹಿಸಲಾಗಿದೆ.

ವರುಣ್ ಸಿಂಗ್ಲಾ ರಜೆಯಲ್ಲಿದ್ದ ಕಾರಣ ಪಲ್ವಾಲ್ ಎಸ್‌ಪಿ ಲೋಕೇಂದ್ರ ಸಿಂಗ್‌ಗೆ ರ್ಯಾಲಿಯ ಸಂದರ್ಭದ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ನುಹ್‌ನ ಹೆಚ್ಚುವರಿ ಜವಾಬ್ದಾರಿಯನ್ನು ನೀಡಲಾಯಿತು.

ನುಹ್‌ನಲ್ಲಿ ವಿಎಚ್‌ಪಿ ಮತ್ತು ಬಜರಂಗದಳ ನಡೆಸಿದ ಧಾರ್ಮಿಕ ಮೆರವಣಿಗೆಯಿಂದ ಹರಿಯಾಣದಲ್ಲಿ ಗಲಭೆ ಉಂಟಾಗಿದೆ. ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿ ಹಾಗೂ ಧರ್ಮಗುರು ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com