ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ, ಆದರೆ...; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ವ್ಯಕ್ತಿಯ ಪ್ರತಿಕ್ರಿಯೆ..

ಮೋದಿ ಉಪನಾಮ ಅವಹೇಳನ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಕಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 
ಪೂರ್ಣೇಶ್ ಮೋದಿ
ಪೂರ್ಣೇಶ್ ಮೋದಿ

ನವದೆಹಲಿ: ಮೋದಿ ಉಪನಾಮ ಅವಹೇಳನ ಪ್ರಕರಣದಲ್ಲಿ ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಮಾನನಷ್ಟ ಮೊಕದ್ದಮೆ ಹಾಕಿದ್ದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ. 

ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುವುದಾಗಿ ಹೇಳಿರುವ ಪೂರ್ಣೇಶ್ ಮೋದಿ, ಸೆಷನ್ಸ್ ಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.
 
ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ತಿರಸ್ಕರಿಸುವಂತೆ ಬಿಜೆಪಿ ಶಾಸಕರು ಕೋರ್ಟ್ ಗೆ ಮನವಿ ಮಾಡಿದ್ದರು.  ರಾಹುಲ್ ಗಾಂಧಿ ಮೋದಿ ಉಪನಾಮ ಇರುವ ಎಲ್ಲರನ್ನೂ ಅವಹೇಳನ ಮಾಡಿದ್ದಾರೆ, ಅದರಲ್ಲೂ ಗುಜರಾತ್ ನ ಮೋದ್ ವನಿಕ್ ಸಮುದಾಯವನ್ನು ಅವಹೇಳನ ಮಾಡಿದ್ದಾರೆ ಎಂದು ಪೂರ್ಣೇಶ್ ಮೋದಿ ಹೇಳಿದ್ದರು.

ಇದನ್ನೂ ಓದಿ: ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ: ಸತ್ಯಕ್ಕೆ ಇಂದಲ್ಲಾ ನಾಳೆ ಗೆಲುವು ಸಿಕ್ಕೇ ಸಿಗುತ್ತೆ- ರಾಹುಲ್ ಗಾಂಧಿ
 
2019 ರಲ್ಲಿ ಕೋಲಾರದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ಮೋದಿ ಎಂಬ ಉಪನಾಮ ಹೊಂದಿರುವ ಎಲ್ಲರೂ ಏಕೆ ಕಳ್ಳರಾಗಿರುತ್ತಾರೆ? ಎಂದು ಪ್ರಶ್ನಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com