ಹಸುವಿಗೆ ಡಿಕ್ಕಿ ತಪ್ಪಿಸಲು ಹೋಗಿ ಕಾರಿಗೆ ಬಸ್ ಡಿಕ್ಕಿ: ಪೊಲೀಸ್ ಪೇದೆ ಹಾಗೂ ಪತ್ನಿ ದುರ್ಮರಣ, ಇಬ್ಬರು ಮಕ್ಕಳಿಗೆ ಗಾಯ

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.
ಮೃತಪಟ್ಟ ಪೇದೆ
ಮೃತಪಟ್ಟ ಪೇದೆ

ಭಿಂಡ್: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದು ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

ಮೃತ ಪೊಲೀಸ್ ಮಧ್ಯಪ್ರದೇಶ ಪೊಲೀಸರ ವಿಶೇಷ ಸಶಸ್ತ್ರ ಪಡೆಯ(ಎಸ್‌ಎಎಫ್) 14 ನೇ ಬೆಟಾಲಿಯನ್‌ನಲ್ಲಿದ್ದರು. ಇಂದು ಬೆಳಗ್ಗೆ ಭಿಂಡ್-ಗ್ವಾಲಿಯರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. 

ಗ್ವಾಲಿಯರ್‌ನಲ್ಲಿರುವ ರಾಜ್ಯ ಪೊಲೀಸ್‌ನ 14ನೇ ಬೆಟಾಲಿಯನ್‌ನಲ್ಲಿ ಹೆಡ್ ಕಾನ್‌ಸ್ಟೆಬಲ್ ಆಗಿ ನಿಯೋಜನೆಗೊಂಡಿರುವ ಅನಿರುದ್ಧ್ ಯಾದವ್, ಒಬ್ಬರ ಸಾವಿನ ನಂತರ ತಮ್ಮ ಕುಟುಂಬದೊಂದಿಗೆ ತಮ್ಮ ಸ್ವಂತ ಗ್ರಾಮವಾದ ಸಾಗ್ರಾ (ಉತ್ತರ ಪ್ರದೇಶ) ಗೆ ಕಾರಿನಲ್ಲಿ ಹೋಗುತ್ತಿದ್ದರು ಎಂದು ಮೆಹಗಾಂವ್ ಪೊಲೀಸ್ ಠಾಣೆಯ ಉಸ್ತುವಾರಿ ಒಪಿ ಮಿಶ್ರಾ ಹೇಳಿದ್ದಾರೆ.

ಮೆಹಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಬರ್ಹಾದ್ ಗ್ರಾಮದ ಬಳಿ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ಯಾದವ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅನಿರುದ್ಧ್ ಯಾದವ್ ಮತ್ತು ಅವರ ಪತ್ನಿ ಮೀರಾ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಅವರ 20 ವರ್ಷದ ಮಗಳು ಪ್ರೀತಿ ಮತ್ತು 23 ವರ್ಷದ ಮಗ ಅಭಿಷೇಕ್ ಗಾಯಗೊಂಡಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ವೇಗವಾಗಿ ಬಂದ ಬಸ್‌ನ ಚಾಲಕನು ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ವಿವರವಾದ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com