ನುಹ್ ಜಿಲ್ಲೆಯಲ್ಲಿ ಹಿಂಸಾಚಾರ
ನುಹ್ ಜಿಲ್ಲೆಯಲ್ಲಿ ಹಿಂಸಾಚಾರ

ಹರಿಯಾಣದ ನುಹ್‌ನಲ್ಲಿ ಹಿಂಸಾಚಾರ: ಆಗಸ್ಟ್ 8 ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತ ಮುಂದುವರಿಕೆ

ಹರಿಯಾಣದ ನುಹ್ ಜಿಲ್ಲೆಯಲ್ಲಿ ಆಗಸ್ಟ್ 8 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹರಿಯಾಣ ಸರ್ಕಾರ ಭಾನುವಾರ ಪ್ರಕಟಿಸಿದೆ. ಹರಿಯಾಣ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಹೇಳಲಾಗಿದೆ.
Published on

ನುಹ್: ಹರಿಯಾಣದ ನುಹ್ ಜಿಲ್ಲೆಯಲ್ಲಿ ಆಗಸ್ಟ್ 8 ರವರೆಗೆ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಹರಿಯಾಣ ಸರ್ಕಾರ ಭಾನುವಾರ ಪ್ರಕಟಿಸಿದೆ.

ಹರಿಯಾಣ ಗೃಹ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ಜಿಲ್ಲೆಯಲ್ಲಿ ಪರಿಸ್ಥಿತಿ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಹೇಳಲಾಗಿದೆ.

'ಆದರೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಮತ್ತು ಪರಿಸ್ಥಿತಿಗಳು ಇನ್ನೂ ಗಂಭೀರ ಮತ್ತು ಉದ್ವಿಗ್ನತೆಯಿಂದ ಕೂಡಿದೆ ಎಂದು ಜಿಲ್ಲಾಧಿಕಾರಿಗಳು ನನ್ನ ಗಮನಕ್ಕೆ ತಂದಿದ್ದಾರೆ' ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

'ಸದ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಿದ ನಂತರ ಮತ್ತು ನುಹ್ ಡೆಪ್ಯೂಟಿ ಕಮಿಷನರ್ ಶಿಫಾರಸಿನ ಮೇರೆಗೆ, ಸಾರ್ವಜನಿಕ ಆಸ್ತಿಗಳು ಮತ್ತು ಸೌಕರ್ಯಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಸುಳ್ಳು ಮಾಹಿತಿ ಮತ್ತು ವದಂತಿಗಳ ಮೂಲಕ ಇಂಟರ್ನೆಟ್ ಸೇವೆಯ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ನುಹ್‌ನಲ್ಲಿ ಇಂಟರ್ನೆಟ್ ಸೇವೆಗಳಿಗೆ ನಿರ್ಬಂಧ ವಿಧಿಸಲಾಗಿದೆ' ಎಂದು ಹೇಳಿಕೆ ಸೇರಿಸಲಾಗಿದೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ಜುಲೈ 31ರಂದು ಎರಡು ಗುಂಪುಗಳ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಇಬ್ಬರು ಗೃಹ ರಕ್ಷಕರು ಸೇರಿದಂತೆ ಆರು ಮಂದಿ ಸಾವಿಗೀಡಾಗಿದ್ದರು ಮತ್ತು 88 ಮಂದಿ ಗಾಯಗೊಂಡಿದ್ದಾರೆ  ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರ ಮತ್ತು ಗಲಭೆಗೆ ಸಂಬಂಧಿಸಿದಂತೆ 141 ಜನರನ್ನು ಬಂಧಿಸಲಾಗಿದೆ ಮತ್ತು 55 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಹರಿಯಾಣ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಈಮಧ್ಯೆ, ನುಹ್‌ನಲ್ಲಿನ ಘರ್ಷಣೆಯ ನಂತರ ಗುರುಗ್ರಾಮ ಮತ್ತು ಪಕ್ಕದ ಜಿಲ್ಲೆಗಳಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 27 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಮತ್ತು 38 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗುರುಗ್ರಾಮದ ಪೊಲೀಸರು ತಿಳಿಸಿದ್ದಾರೆ.

X

Advertisement

X
Kannada Prabha
www.kannadaprabha.com