ಸೆಂಥಿಲ್​ ಬಾಲಾಜಿಗೆ ಮತ್ತೆ ಶಾಕ್​.. ಇಡಿ ಬಂಧನ ಊರ್ಜಿತಗೊಳಿಸಿದ ಸುಪ್ರೀಂಕೋರ್ಟ್​, ಮತ್ತೆ 5 ದಿನ ಕಸ್ಟಡಿ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 14 ರಂದು ಬಂಧಿತರಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ಚೆನ್ನೈ ನ್ಯಾಯಾಲಯ ಸೋಮವಾರ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.
ಸೆಂಥಿಲ್​ ಬಾಲಾಜಿ
ಸೆಂಥಿಲ್​ ಬಾಲಾಜಿ
Updated on

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 14 ರಂದು ಬಂಧಿತರಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಮತ್ತೆ ಐದು ದಿನಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲು ಚೆನ್ನೈ ನ್ಯಾಯಾಲಯ ಸೋಮವಾರ ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ.

ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಪ್ರಧಾನ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎಸ್ ಅಲ್ಲಿ ಅವರು ಇಡಿ ಕಸ್ಟಡಿಗೆ ಅನುಮತಿ ನೀಡಿದ್ದಾರೆ. ಪುಳಲ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರುಪಡಿಸಲಾದ ಸೆಂಥಿಲ್ ಬಾಲಾಜಿಗೆ ನ್ಯಾಯಾಧೀಶರು ಇದೇ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಎತ್ತಿ ಹಿಡಿದಿರುವ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬಾಲಾಜಿ ಮತ್ತು ಅವರ ಪತ್ನಿ ಮೇಘಲಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಅದೇ ದಿನದಲ್ಲಿ ಈ ಆದೇಶ ಬಂದಿದೆ. ಸುಪ್ರೀಂ ಕೋರ್ಟ್ ಬಾಲಾಜಿಯನ್ನು ಆಗಸ್ಟ್ 12 ರವರೆಗೆ ಇಡಿಗೆ ಐದು ದಿನಗಳ ಕಸ್ಟಡಿಗೆ ನೀಡಿದೆ.

ಪ್ರಕರಣದ ಹಿನ್ನೆಲೆ
ಮಾಜಿ ಸಿಎಂ ದಿ. ಜೆ. ಜಯಲಲಿತಾ ನೇತೃತ್ವದ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ನಗದು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜೂನ್ 14ರಂದು ಜಾರಿ ನಿರ್ದೇಶನಾಲಯ ಬಂಧಿಸಿದೆ. ಸದ್ಯ ಎಂಕೆ ಸ್ಟಾಲಿನ್​​ ನೇತೃತ್ವದ ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ಸೆಂಥಿಲ್ ಬಾಲಾಜಿ ಅವರದ್ದು ಅಕ್ರಮ ಬಂಧನ ಎಂದು ಆರೋಪಿಸಿ ಅವರ ಪತ್ನಿ ಅರ್ಜಿ ಸಲ್ಲಿಸಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com