ರೈಲಿನಲ್ಲಿ ಗುಂಡಿನ ದಾಳಿ: ಆರೋಪಿ ಆರ್‌ಪಿಎಫ್ ಕಾನ್‌ಸ್ಟೆಬಲ್‌ ಪೊಲೀಸ್ ಕಸ್ಟಡಿ ಆ.11ರವರೆಗೆ ವಿಸ್ತರಣೆ

ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಸೋಮವಾರ ಆಗಸ್ಟ್ 7 ರವರೆಗೆ...
ಒಳ ಚಿತ್ರ ಆರೋಪಿ ಚೇತನ್ ಸಿಂಗ್
ಒಳ ಚಿತ್ರ ಆರೋಪಿ ಚೇತನ್ ಸಿಂಗ್

ಮುಂಬೈ: ಚಲಿಸುತ್ತಿದ್ದ ರೈಲಿನಲ್ಲಿ ತನ್ನ ಹಿರಿಯ ಸಹೋದ್ಯೋಗಿ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ರೈಲ್ವೆ ರಕ್ಷಣಾ ಪಡೆ(ಆರ್‌ಪಿಎಫ್) ಕಾನ್‌ಸ್ಟೆಬಲ್ ಚೇತನ್ ಸಿಂಗ್ ಅವರ ಪೊಲೀಸ್ ಕಸ್ಟಡಿಯನ್ನು ನ್ಯಾಯಾಲಯ ಸೋಮವಾರ ಆಗಸ್ಟ್ 7 ರವರೆಗೆ ವಿಸ್ತರಿಸಿದೆ.

ಸಾಕ್ಷಿಗಳನ್ನು ಗುರುತಿಸಲು ಮತ್ತು ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಬೇಕಾಗಿರುವುದರಿಂದ ಆರೋಪಿಯ ಪೊಲೀಸ್ ಕಸ್ಟಡಿ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸುವಂತೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್‌ಪಿ) ಕೋರಿದರು.

ಆದಾಗ್ಯೂ, ಮ್ಯಾಜಿಸ್ಟ್ರೇಟ್ ಕೋರ್ಟ್, ಚೇತನ್ ಸಿಂಗ್ ಅವರ ಕಸ್ಟಡಿಯ ಅವಧಿಯನ್ನು ಆಗಸ್ಟ್ 11 ರವರೆಗೆ ವಿಸ್ತರಿಸಿ ಆದೇಶಿಸಿದೆ.

ಜುಲೈ 31 ರಂದು ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಚೇತನ್ ಸಿಂಗ್ ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಆರೋಪಿ ಕಾನ್‌ಸ್ಟೆಬಲ್ ಚೇತನ್ ಸಿಂಗ್(34) ತನ್ನ ಹಿರಿಯ - ಆರ್‌ಪಿಎಫ್ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಟಿಕಾರಾಂ ಮೀನಾ ಮತ್ತು ರೈಲಿನಲ್ಲಿದ್ದ ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com