ಭಾರತ್ ಜೋಡೋ ಭಾಗ-2: ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ.
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ.

ಈ ಬಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಮಂಗಳವಾರ ಖಚಿತಪಡಿಸಿದ್ದು, ರಾಹುಲ್ ಗಾಂಧಿ ಅವರು ಗುಜರಾತ್‌ನಿಂದ ಮೇಘಾಲಯದವರೆಗೆ ಎರಡನೇ ಹಂತದ ಭಾರತ್ ಜೋಡೊ ಯಾತ್ರೆ ನಡೆಸಲಿದ್ದಾರೆ. ಪ್ರಮುಖ ಕಾಂಗ್ರೆಸ್ ನಾಯಕರು ಪಶ್ಚಿಮ ರಾಜ್ಯದ ವಿವಿಧ ಭಾಗಗಳಲ್ಲಿ ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಆದಾಗ್ಯೂ, ಹೊಸ ಮಾರ್ಗ ಮತ್ತು ಅನುಗುಣವಾದ ದಿನಾಂಕಗಳ ಬಗ್ಗೆ ವಿವರಗಳು ಇಲ್ಲಿಯವರೆಗೆ ದೃಢೀಕರಿಸಲ್ಪಟ್ಟಿಲ್ಲ.

ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹಮ್ಮಿಕೊಂಡಿದ್ದ ಭಾರತ್ ಜೋಡೊ ಪಾದಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಕ್ಕಿತ್ತು. ಕಳೆದ ವರ್ಷ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಪ್ರಾರಂಭವಾದ ಭಾರತ್ ಜೋಡೋ ಯಾತ್ರೆಯು 3,970 ಕಿಮೀ, 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿ 130 ದಿನಗಳಿಗಿಂತ ಹೆಚ್ಚು ಕಾಲ ನಡೆದ ನಂತರ ಶ್ರೀನಗರದಲ್ಲಿ ಜನವರಿ 30 ರಂದು ಮುಕ್ತಾಯಗೊಂಡಿತು. ಈಗ ಎರಡನೇ ಹಂತದಲ್ಲಿ ಗುಜರಾತ್‌ನಿಂದ ಮೇಘಾಲಯಕ್ಕೆ ಯಾತ್ರೆ ಹಮ್ಮಿಕೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ಸುಮಾರು 4,000 ಕಿ.ಮೀ. ಪಾದಯಾತ್ರೆ ನಡೆಸಿದ್ದರು. 2022 ಸೆಪ್ಟೆಂಬರ್ 7ರಂದು ಆರಂಭವಾದ ಯಾತ್ರೆಯು ಜನವರಿ 30ರಂದು ಶ್ರೀನಗರದಲ್ಲಿ ಮುಕ್ತಾಯಗೊಂಡಿತ್ತು. 130 ದಿನಗಳ ಕಾಲ 12 ರಾಜ್ಯಗಳಲ್ಲಿ ಯಾತ್ರೆ ಸಾಗಿತ್ತು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com