

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬುಧವಾರ ಸಂಸತ್ತಿಗೆ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಸ್ಕೂಟರ್ನಿಂದ ಬಿದ್ದಿದ್ದು, ಇದನ್ನು ಗಮನಿಸಿದ ಅವರು ತಮ್ಮ ಕಾರು ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಯ ಬಳಿ ತೆರಳಿ ಯೋಗಕ್ಷೇಮ ವಿಚಾರಿಸಿದರು.
ಇಂದು ಮಣಿಪುರ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯದ ಮೇಲೆ ಮಾತನಾಡಲು ಸಂಸತ್ತಿಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರು ತಮ್ಮ ಕಾರು ನಿಲ್ಲಿಸಿ, ದ್ವಿಚಕ್ರ ವಾಹನದಿಂದ ಬಿದ್ದ ವ್ಯಕ್ತಿಯನ್ನು ವಿಚಾರಿಸಿದ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋವನ್ನು ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದೆ.