ಅಕ್ರಮ ಹಣ ವರ್ಗಾವಣೆ ಪ್ರಕರಣ: ನವಾಬ್ ಮಲಿಕ್‌ಗೆ 2 ತಿಂಗಳು ಮಧ್ಯಂತರ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ವೈದ್ಯಕೀಯ ಕಾರಣಗಳಿಗಾಗಿ ಎರಡು ತಿಂಗಳ ಮಧ್ಯಂತರ ಜಾಮೀನು ಮಂಜೂರು...
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ವೈದ್ಯಕೀಯ ಕಾರಣಗಳಿಗಾಗಿ ಎರಡು ತಿಂಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ನವಾಬ್ ಮಲಿಕ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ಪೀಠ, ಆರೋಪಿ ಮೂತ್ರಪಿಂಡ ಕಾಯಿಲೆ ಮತ್ತು ಇತರ ಕಾಯಿಲೆಗಳಿಂದ ಆಸ್ಪತ್ರೆಯಲ್ಲಿರುವುದನ್ನು ಗಮನಿಸಿ ಜಾಮೀನು ಮಂಜೂರು ಮಾಡಿದೆ.

"ನಾವು ವೈದ್ಯಕೀಯ ಪರಿಸ್ಥಿತಿಗಳ ಮೇಲೆ ಕಟ್ಟುನಿಟ್ಟಾಗಿ ಆದೇಶವನ್ನು ರವಾನಿಸುತ್ತಿದ್ದೇವೆ ಮತ್ತು ಪ್ರಕರಣದ ಅರ್ಹತೆಯನ್ನು ಪರಿಗಣಿಸುತ್ತಿಲ್ಲ" ಎಂದು ಪೀಠ ಹೇಳಿದೆ.

ಎನ್‌ಸಿಪಿ ನಾಯಕ ನ್ಯಾಯಾಂಗ ನವಾಬ್ ಮಲಿಕ್ ಅವರು ನ್ಯಾಯಂಗ ಬಂಧನದಲ್ಲಿದ್ದು, ಪ್ರಸ್ತುತ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com