ತಮಿಳುನಾಡು: ನಿಯಂತ್ರಣ ತಪ್ಪಿ ಮೂರು ದ್ವಿಚಕ್ರ ವಾಹನಗಳ ಮೇಲೆ ಹರಿದ ಲಾರಿ; ಆರು ಮಂದಿ ಸಾವು, 9 ಜನರಿಗೆ ಗಾಯ

ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚೆನ್ನೈ: ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ನಡೆದಿದೆ.

ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  ಮೊದಲು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಪಾದಚಾರಿಗಳಿಗೂ ಗುದ್ದಿದೆ, ಪರಿಣಾಮ ಒಂಬತ್ತು ಮಂದಿ ಗಾಯಗೊಂಡಿದ್ದು, ಅವರನ್ನು  ಜಿಲ್ಲಾಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದಾರೆ. ಇದರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಅತೀ ವೇಗದಲ್ಲಿ ಬಂದ ಲಾರಿ ಒಂದರ ಹಿಂದೆ ಒಂದರಂತೆ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಟಿಪ್ಪರ್ ಲಾರಿ ವಾಹನಗಳಿಗೆ ಮಾತ್ರವಲ್ಲದೆ ಪಾದಚಾರಿಗಳಿಗೂ ಡಿಕ್ಕಿ ಹೊಡೆದಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಚಾಲಕ ತಲೆಮರೆಸಿಕೊಂಡಿದ್ದು, ಆತನನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಚೆಂಗಲ್ಪಟ್ಟು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com