ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಸಮಿತಿಗೆ ಸುಧಾ ಮೂರ್ತಿ, ಶಂಕರ್ ಮಹಾದೇವನ್ ನೇಮಕ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್...
ಶಂಕರ್ ಮಹಾದೇವನ್ - ಸುಧಾ ಮೂರ್ತಿ
ಶಂಕರ್ ಮಹಾದೇವನ್ - ಸುಧಾ ಮೂರ್ತಿ

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ(ಎನ್‌ಸಿಇಆರ್‌ಟಿ) ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಚಿಸಿರುವ ನೂತನ ಸಮಿತಿಗೆ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಗೀತ ನಿರ್ದೇಶಕ ಶಂಕರ್ ಮಹಾದೇವನ್ ಅವರು ಸೇರಿದಂತೆ 19 ಸದಸ್ಯರನ್ನು ನೇಮಕ ಮಾಡಲಾಗಿದೆ.

ಅರ್ಥಶಾಸ್ತ್ರಜ್ಞ ಸಂಜೀವ್ ಸನ್ಯಾಲ್ ಮತ್ತು ಇತರ 16 ಮಂದಿ, ಎನ್‌ಸಿಇಆರ್‌ಟಿ ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ರಚಿಸಿರುವ ಹೊಸ ಸಮಿತಿಯ ಭಾಗವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆ(NIEPA) ಕುಲಪತಿ ಎಂಸಿ ಪಂತ್ ನೇತೃತ್ವದಲ್ಲಿ 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿ(NSTC) ರಚಿಸಲಾಗಿದೆ. ಈ ಸಮಿತಿ 3 ರಿಂದ 12 ನೇ ತರಗತಿಗಳಿಗೆ ಪಠ್ಯಪುಸ್ತಕಗಳನ್ನು ಅಂತಿಮಗೊಳಿಸಲಿದೆ.

ಪಠ್ಯಪುಸ್ತಕಗಳು ಮತ್ತು ಇತರ ಬೋಧನಾ ಕಲಿಕಾ ಸಾಮಗ್ರಿಗಳ ಬಗ್ಗೆ ಈ ಸಮಿತಿ ತೀರ್ಮಾನ ಕೈಗೊಳ್ಳಲಿದ್ದು, ಇವುಗಳನ್ನು ಎನ್‌ಸಿಇಆರ್‌ಟಿ ನಿಯಮಗಳ ಪ್ರಕಾರ ಪ್ರಕಟಿಸಿ ಬಳಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com