'ಹರ್ ಘರ್ ತಿರಂಗಾ' ಅಭಿಯಾನದಲ್ಲಿ ಪಾಲ್ಗೊಂಡು ರಾಷ್ಟ್ರಪ್ರೇಮ ಮೆರೆಯಿರಿ: ದೇಶದ ಜನತೆಗೆ ಪ್ರಧಾನಿ ಮೋದಿ ಕರೆ

ನಾಳೆ ಆಗಸ್ಟ್ 13 ರಿಂದ 15ರ ವರೆಗೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸೋಣ, ರಾಷ್ಟ್ರಪ್ರೇಮ ಮೆರೆಯೋಣ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ನಾಳೆ ಆಗಸ್ಟ್ 13 ರಿಂದ 15ರ ವರೆಗೆ ಮನೆ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ ರಾಷ್ಟ್ರ ಧ್ವಜಕ್ಕೆ ಗೌರವ ಸಲ್ಲಿಸೋಣ, ರಾಷ್ಟ್ರಪ್ರೇಮ ಮೆರೆಯೋಣ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳೋಣ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, 'ಹರ್ ಘರ್ ತಿರಂಗಾ’ ಅಭಿಯಾನವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಹೊಸ ಶಕ್ತಿಯನ್ನು ನೀಡುತ್ತದೆ. ದೇಶವಾಸಿಗಳು ಈ ಅಭಿಯಾನವನ್ನು ಈ ವರ್ಷ ಹೊಸ ಎತ್ತರಕ್ಕೆ ಕೊಂಡೊಯ್ಯಬೇಕು. ಆಗಸ್ಟ್ 13 ರಿಂದ 15 ರ ನಡುವೆ ದೇಶದ ಹೆಮ್ಮೆಯ ಸಂಕೇತವಾದ ರಾಷ್ಟ್ರಧ್ವಜವನ್ನು ಹಾರಿಸಿ harghartiranga.com ನಲ್ಲಿ ತ್ರಿವರ್ಣ ಧ್ವಜದೊಂದಿಗೆ ನಿಮ್ಮ ಸೆಲ್ಫಿಯನ್ನು ಅಪ್‌ಲೋಡ್ ಮಾಡಿ.

''ತಿರಂಗ, ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಚೈತನ್ಯವನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯ ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತಾನೆ. ಇದು ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತದೆ. ಆಗಸ್ಟ್ 13 ರಿಂದ 15 ರ ಮಧ್ಯೆ ನಡೆಯುವ #ಹರ್ ಘರ್ ತಿರಂಗಾ ಆಂದೋಲನದಲ್ಲಿ ಪಾಲ್ಗೊಳ್ಳುವಂತೆ ನಾನು ನಿಮ್ಮೆಲ್ಲರನ್ನು ಕೋರುತ್ತೇನೆ. ತಿರಂಗಾದೊಂದಿಗೆ ನಿಮ್ಮ ಫೋಟೋಗಳನ್ನು ಇಲ್ಲಿ harghartiranga.com ನಲ್ಲಿ ಅಪ್‌ಲೋಡ್ ಮಾಡಿ'' ಎಂದು ಪ್ರಧಾನ ಮಂತ್ರಿಗಳು ಮನವಿ ಮಾಡಿಕೊಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com