ಅನ್ಬಿಲ್ ಮಹೇಶ್
ದೇಶ
ತಮಿಳುನಾಡು ಸಚಿವ ಅನ್ಬಿಲ್ ಮಹೇಶ್ಗೆ ಹಠಾತ್ ಎದೆನೋವು; ಬೆಂಗಳೂರಿನಲ್ಲಿ ಆಂಜಿಯೋಗ್ರಾಮ್
ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಕೃಷ್ಣಗಿರಿ ಜಿಲ್ಲೆಗೆ ಶನಿವಾರ ಭೇಟಿ ನೀಡಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನರಿ ಆಂಜಿಯೋಗ್ರಾಮ್ ಚಿಕಿತ್ಸೆ
ಬೆಂಗಳೂರು: ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಕೃಷ್ಣಗಿರಿ ಜಿಲ್ಲೆಗೆ ಶನಿವಾರ ಭೇಟಿ ನೀಡಿದ್ದ ವೇಳೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೊನರಿ ಆಂಜಿಯೋಗ್ರಾಮ್ ಚಿಕಿತ್ಸೆ ನೀಡಲಾಗಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ಬೆಂಗಳೂರಿಗೆ ಸಮೀಪದ ಕೃಷ್ಣಗಿರಿಗೆ ತೆರಳುತ್ತಿದ್ದ ಸಚಿವರಿಗೆ ಇದ್ದಕ್ಕಿದ್ದಂತೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಹೇಳಿಕೆ ನೀಡಿರುವ ನಾರಾಯಣ ಹೃದಯಾಲಯ, ''ತಮಿಳುನಾಡು ಶಿಕ್ಷಣ ಸಚಿವರು ನಾರಾಯಣ ಹೆಲ್ತ್ ಸಿಟಿಗೆ ನಿಯಮಿತ ತಪಾಸಣೆಗಾಗಿ ಬಂದಿದ್ದು, ಅವರು ಕೊರೊನರಿ ಆಂಜಿಯೋಗ್ರಾಮ್ ಮಾಡಿಸಿಕೊಳ್ಳಲು ಯೋಜಿಸಿದ್ದಾರೆ ಎಂದು ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ