ರಾಜಸ್ಥಾನ: ಸರ್ಕಾರಿ ನೌಕರನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಪ್ರಕರಣ ದಾಖಲು

ಶನಿವಾರ ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್‌ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕರೌಲಿ: ಶನಿವಾರ ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್‌ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಆರೋಪಿ ಸರ್ಕಾರಿ ನೌಕರನನ್ನು ಸುನೀಲ್ ಕುಮಾರ್ ಜಂಗಿದ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಹಿರಿಯ ಸಹಾಯಕರಾಗಿ ನಿಯೋಜಿಸಲಾಗಿದ್ದು, ಘಟನೆ ಬೆಳಕಿಗೆ ಬಂದ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ಆತನನ್ನು ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

'ನಾವು ಪ್ರಕರಣವನ್ನು ಮತ್ತಷ್ಟು ಪರಿಶೀಲಿಸುತ್ತಿದ್ದೇವೆ' ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖಾ ಆದೇಶ ತಿಳಿಸಿದೆ.

ಪಿಎಚ್‌ಇಡಿಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದ ಕಿರೋಡಿ ಲಾಲ್ ಮೀನಾ ಅವರು ಆರೋಪಿಗಳನ್ನು ರಕ್ಷಿಸಿ ಸಾಕ್ಷ್ಯಗಳನ್ನು ತಿರುಚಿ, ಪ್ರಕರಣದ ತನಿಖೆಯನ್ನು ದಾರಿ ತಪ್ಪಿಸಿದ ಆರೋಪವೂ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com