ದೇಶ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೇಶ 'ವಿಭಜನೆಯ ಕ್ರೌರ್ಯದ ನೆನಪಿನ ದಿನ'ದಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ನೆನಪಿಸಿಕೊಂಡರು.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಭಾರತ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದೇಶ 'ವಿಭಜನೆಯ ಕರಾಳ ನೆನಪಿನ ದಿನ'ವಾದ ಇಂದು ಆ ಅವಧಿಯಲ್ಲಿ ಜನರು ಅನುಭವಿಸಿದ ನೋವುಗಳನ್ನು ನೆನಪಿಸಿಕೊಂಡರು.

ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಭಾರತೀಯರನ್ನು ಸ್ಮರಿಸಿಕೊಳ್ಳುವ ಸಂದರ್ಭ ಇದಾಗಿದೆ ಎಂದು ಅವರು ಹೇಳಿದರು. 

ದೇಶ ವಿಭಜನೆಯಲ್ಲಿ ಪ್ರಾಣ ತ್ಯಾಗ ಮಾಡಿದ ಭಾರತೀಯರನ್ನು ಪೂಜ್ಯಭಾವದಿಂದ ಸ್ಮರಿಸುವ ಸಂದರ್ಭವೇ ವಿಭಜನೆಯ ಸಂಸ್ಮರಣಾ ದಿನವಾಗಿದೆ. ಇದರೊಂದಿಗೆ, ಈ ದಿನವು ಸ್ಥಳಾಂತರದ ಭಾರವನ್ನು ಹೊರಲು ಒತ್ತಾಯಿಸಲ್ಪಟ್ಟವರ ನೋವು ಮತ್ತು ಹೋರಾಟವನ್ನು ನಮಗೆ ನೆನಪಿಸುತ್ತದೆ. ಅಂತಹ ಎಲ್ಲರಿಗೂ ನಾನು ನಮಸ್ಕರಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

1947 ರಲ್ಲಿ ಸಂಭವಿಸಿದ ವಿಭಜನೆಯು ಬ್ರಿಟಿಷ್ ಭಾರತವನ್ನು ಭಾರತ ಮತ್ತು ಪಾಕಿಸ್ತಾನ ಎಂಬ ಎರಡು ಪ್ರತ್ಯೇಕ ರಾಷ್ಟ್ರಗಳಾಗಿ ವಿಭಜಿಸಿತು. ಈ ವಿಭಜನೆಯು ವ್ಯಾಪಕವಾದ ಕೋಮು ಹಿಂಸಾಚಾರ ಮತ್ತು ಸ್ಥಳಾಂತರಕ್ಕೆ ಕಾರಣವಾಯಿತು. ಇದು ವಿವಿಧ ಸಮುದಾಯಗಳ ಸಾವಿರಾರು ಜನರ ಸಾವಿಗೆ ಕಾರಣವಾಯಿತು. 

ಈ ದಿನವು ಬಲವಂತವಾಗಿ ವಲಸೆ ಬಂದವರ ಸಂಕಷ್ಟ ಮತ್ತು ಹೋರಾಟದ ಸ್ಮರಣಾರ್ಥವೂ ಆಗಿದೆ ಎಂದು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ದೇಶ ವಿಭಜನೆಯ ದಿನವಾದ ಆಗಸ್ಟ್ 14 ಅನ್ನು, ಇನ್ನು ಮುಂದೆ ‘ವಿಭಜನೆಯ ಕರಾಳ ನೆನಪಿನ ದಿನ’ವನ್ನಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ 2021ರಲ್ಲಿ ಘೋಷಿಸಿದ್ದರು.

ವಿಭಜನೆಯ ಸಂದರ್ಭವನ್ನು ನೆನಪಿಸಿಕೊಂಡ ಪ್ರಧಾನಿ, ‘ವಿಭಜನೆಯ ನೋವನ್ನು ಎಂದಿಗೂ ಮರೆಯಲಾಗದು. ತಿಳಿಗೇಡಿಗಳಿಂದ ಭುಗಿಲೆದ್ದ ದ್ವೇಷ–ಹಿಂಸಾಚಾರದಲ್ಲಿ ನಮ್ಮ ಲಕ್ಷಾಂತರ ಸೋದರ-ಸೋದರಿಯರು ಸ್ಥಳಾಂತರಗೊಳ್ಳಬೇಕಾಯಿತು. ಆ ಸಂದರ್ಭದಲ್ಲಿ ಅನೇಕರು ಪ್ರಾಣ ಕಳೆದುಕೊಂಡರು’ ಎಂದು ಹೇಳಿದ್ದರು.

ಅವರ ಹೋರಾಟ ಹಾಗೂ ತ್ಯಾಗದ ಸ್ಮರಣೆಗಾಗಿ ಆಚರಿಸುವ ಈ ದಿನವು, ಸಮಾಜ ವಿಭಜಿಸುವ, ಸಾಮರಸ್ಯವನ್ನು ಕದಡುವಂಥ ವಿಷವನ್ನು ತೆಗೆದುಹಾಕುವ ಅಗತ್ಯವನ್ನು ನೆನಪಿಸುತ್ತದೆ ಹಾಗೂ ನಮ್ಮ ಏಕತೆಯ ಭಾವಕ್ಕೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣಕ್ಕೆ ಬಲ ತುಂಬಲಿದೆ’ ಎಂದು ಹೇ ಳಿದ್ದಾರೆ.

ದೇಶ ವಿಭಜನೆಯಾದ ದಿವಸದಂದು (ಆಗಸ್ಟ್ 14) ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿದೆ. ಭಾರತವು, ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com