ಶಿಮ್ಲಾದಲ್ಲಿ ದೇಗುಲ ಕುಸಿತ
ಶಿಮ್ಲಾದಲ್ಲಿ ದೇಗುಲ ಕುಸಿತ

ಹಿಮಾಚಲದಲ್ಲಿ ಮೇಘಸ್ಫೋಟ: ಶಿಮ್ಲಾದಲ್ಲಿ ದೇಗುಲ ಕುಸಿತ; 9 ಸಾವು, ಕನಿಷ್ಟ 20 ಮಂದಿ ಅವಶೇಷಗಳಡಿ!

ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಮಳೆಯ ರೌದ್ರಾವಾತಾರ ಮುಂದುವರೆದಿದ್ದು, ಮೇಘಸ್ಫೋಟದ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹದಿಂದಾಗಿ ಸೋಮವಾರ ಶಿಮ್ಲಾದಲ್ಲಿ ಶಿವನ ದೇವಾಲಯ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಶಿಮ್ಲಾ ಜಿಲ್ಲೆಯ ಸಮ್ಮರ್ ಹಿಲ್ ಪ್ರದೇಶದಲ್ಲಿರುವ ಶಿವ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಇಡೀ ದೇಗುಲ ಕುಸಿದಿದೆ. ಈ ವೇಳೆ ಹದಿನೈದಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಕನಿಷ್ಟ 9 ಮಂದಿ ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ ಭೂ ಕುಸಿತ ಸಂಭವಿಸಿದ ಸಂದರ್ಭದಲ್ಲಿ ಶಿವನ ದೇವಸ್ಥಾನದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಇದ್ದರು. ಶ್ರಾವಣವಾದ್ದರಿಂದ ಭಕ್ತರು ವಿಶೇಷ ಪೂಜೆ ಸಲ್ಲಿಸಲು ದೇಗುಲದಲ್ಲಿ ಸೇರಿದ್ದರು ಎನ್ನಲಾಗಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ತಂಡದಿಂದ ಮಣ್ಣಿನಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಹಿಮಾಚಲ ಪ್ರದೇಶದ ಸೋಲಾನ್ ಜಿಲ್ಲೆಯಲ್ಲಿ ಈಗಾಗಲೇ ಮೇಘ ಸ್ಫೋಟ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ, ಈ ಘಟನೆಯಲ್ಲಿ ಐವರನ್ನು ರಕ್ಷಣೆ ಮಾಡಲಾಗಿದ್ದು ಓರ್ವ ಕಾಣೆಯಾಗಿದ್ದಾನೆ ಎನ್ನಲಾಗಿದೆ.

ಮುಖ್ಯಮಂತ್ರಿ ಭೇಟಿ
ಘಟನಾ ಸ್ಥಳಕ್ಕೆ ಹಿಮಾಚಲ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ರಕ್ಷಣಾ ಕಾರ್ಯಕ್ಕೆ ಬೇಕಾದ ವ್ಯವಸ್ಥೆಯನ್ನು ಮಾಡುವಂತೆ ಸೂಚನೆ ನೀಡಿದ್ದಾರೆ ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು, 'ಶಿಮ್ಲಾದಿಂದ ದುಃಖದ ಸುದ್ದಿ ಹೊರಬಿದ್ದಿದ್ದು, ಭಾರೀ ಮಳೆಯ ಪರಿಣಾಮವಾಗಿ ಸಮ್ಮರ್ ಹಿಲ್‌ನಲ್ಲಿರುವ "ಶಿವ ಮಂದಿರ" ಕುಸಿದು ಬಿದ್ದಿದ್ದು, ಹೊಮ್ಮಿದೆ. ಸದ್ಯಕ್ಕೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಸಿಲುಕಿರುವ ವ್ಯಕ್ತಿಗಳನ್ನು ರಕ್ಷಿಸುವ ಸಲುವಾಗಿ ಸ್ಥಳೀಯ ಆಡಳಿತವು ಅವಶೇಷಗಳನ್ನು ತೆರವುಗೊಳಿಸಲು ಶ್ರದ್ಧೆಯಿಂದ ಕಾರ್ಯನಿರ್ವಹಿಸುತ್ತಿದೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
 

Related Stories

No stories found.

Advertisement

X
Kannada Prabha
www.kannadaprabha.com