ಐಐಟಿ-ಜೆಇಇ ಆಕಾಂಕ್ಷಿ ನೇಣಿಗೆ ಶರಣು; ಕೋಟಾದಲ್ಲಿ 15 ದಿನದಲ್ಲಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ

ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಐಐಟಿ-ಜೆಇಇ ಆಕಾಂಕ್ಷಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ತಿಂಗಳಲ್ಲಿ ಕೋಚಿಂಗ್ ಪಡೆಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾವಿಗೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೋಟಾ: ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಐಐಟಿ-ಜೆಇಇ ಆಕಾಂಕ್ಷಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ತಿಂಗಳಲ್ಲಿ ಕೋಚಿಂಗ್ ಪಡೆಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಘಟನೆ ಕಳೆದ ರಾತ್ರಿ ಬೆಳಕಿಗೆ ಬಂದಿದ್ದು, ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ಪೋಷಕರ ಆಗಮನದ ನಂತರ ಮರಣೋತ್ತರ ಪರೀಕ್ಷೆಗಾಗಿ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆ(ಎನ್‌ಎಂಸಿಎಚ್) ಶವಾಗಾರದಲ್ಲಿ ಇರಿಸಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಬಿಹಾರದ ಗಯಾದ ವಾಲ್ಮೀಕಿ ಪ್ರಸಾದ್ ಎಂದು ಗುರುತಿಸಲಾಗಿದ್ದು, ಕಳೆದ ಶೈಕ್ಷಣಿಕ ಅವಧಿಯಿಂದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿ ಐಐಟಿ-ಜೆಇಇ ಪ್ರವೇಶ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು ಮತ್ತು ಮಹಾವೀರ್ ನಗರ ಪ್ರದೇಶದ ಪಿಜಿಯಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಮೃತ ಯುವಕ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮಹಾವೀರ್ ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಪರಂಜೀತ್ ಪಟೇಲ್ ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ಬೆಳಕಿಗೆ ಬಂದಿದ್ದು, ಬಳಿಕ ಕೊಠಡಿಯಿಂದ ಮೃತದೇಹವನ್ನು ಹೊರತೆಗೆದು ಪೋಷಕರು ಆಗಮಿಸಿದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಕೊಠಡಿಯಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಮತ್ತು ವಿದ್ಯಾರ್ಥಿಯ ಸಾವಿನ ಹಿಂದಿನ ಕಾರಣದ ಬಗ್ಗೆ ಇನ್ನೂ ತನಿಖೆ ಮಾಡಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com