ಕೃಷ್ಣ ಜನ್ಮಭೂಮಿ ಮಥುರಾದಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ

ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿಯ ಬಳಿ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಒತ್ತುವರಿ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಬುಧವಾರ ತಡೆ ನೀಡಿದ್ದು ಯಥಾಸ್ಥಿತಿಗೆ ಆದೇಶಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸಂಜಯ್ ಕುಮಾರ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣದಲ್ಲಿ ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. '10 ದಿನಗಳ ಅವಧಿಗೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಒಂದು ವಾರದ ನಂತರ ಪ್ರಕರಣದ ವಿಚಾರಣೆಯನ್ನು ಪಟ್ಟಿ ಮಾಡಲಾಗುತ್ತದೆ' ಎಂದು ಪೀಠ ಹೇಳಿದೆ.

ಅರ್ಜಿದಾರ ಯಾಕೂಬ್ ಶಾ ಪರ ವಾದ ಮಂಡಿಸಿದ ವಕೀಲರು, 100 ಮನೆಗಳನ್ನು ಈಗಾಗಲೇ ನೆಲಸಮಗೊಳಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಅಲ್ಲದೆ ಇನ್ನೂ "70-80 ಮನೆಗಳು ಉಳಿದಿವೆ. ಈ ತೆರವು ಕಾರ್ಯಾಚರಣೆ ನಿರುಪಯುಕ್ತವಾಗುತ್ತದೆ. ಅವರು ಉತ್ತರ ಪ್ರದೇಶದ ನ್ಯಾಯಾಲಯಗಳು ರಜೆಯಲ್ಲಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. 

ಈ ವಿಷಯವು ಕೃಷ್ಣ ಜನ್ಮಭೂಮಿಯ ಸಮೀಪವಿರುವ ಬಡಾವಣೆಗಳ ನೆಲಸಮಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com