ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಭೂಕಂಪನ: ರಿಕ್ಟರ್​ ಮಾಪಕದಲ್ಲಿ 3.6ರಷ್ಟು ತೀವ್ರತೆ ದಾಖಲು

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗುರುವಾರ ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ರಜೌರಿ (ಜಮ್ಮು ಮತ್ತು ಕಾಶ್ಮೀರ): ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗುರುವಾರ ಭೂಕಂಪನ ಉಂಟಾಗಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಳಗಿನ ಜಾವ 3.49 ನಿಮಿಷಕ್ಕೆ ಭೂಮಿ ನಡುಗಿದ್ದು, ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ. ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಈವರೆಗೂ ಯಾವುದೇ ಅನಾಹುತಗಳ ಬಗ್ಗೆ ವರದಿಯಾಗಿಲ್ಲ. ರಾತ್ರೋರಾತ್ರಿ ಭೂಮಿ ನಡುಗಿದ ಕಾರಣ ಜನರು ಆತಂಕಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲೂ ಕಂಪಿಸಿದ ಭೂಮಿ:
ಈ ನಡುವೆ ನಿನ್ನೆ(ಬುಧವಾರ) ಮಹಾರಾಷ್ಟ್ರ ಕೊಲ್ಲಾಪುರ ಸೇರಿದಂತೆ ಸಾಂಗ್ಲಿ, ಸತಾರಾ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವವಾಗಿತ್ತು ಎಂದು ತಿಳಿದುಬಂದಿದೆ.

ಭೂಕಂಪದ ಕೇಂದ್ರ ಬಿಂದು ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟಿನಿಂದ ಕೇವಲ ಇಪ್ಪತ್ತು ಕಿಲೋ ಮೀಟರ್ ದೂರದಲ್ಲಿತ್ತು. ಏಕಾಏಕಿ ಭೂಮಿ ನಡುಕ ಉಂಟಾಗಿದ್ದರಿಂದ ನಾಗರಿಕರು ಭಯಗೊಂಡಿದ್ದರು. ಭೂಕಂಪ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.4 ದಾಖಲಾಗಿತ್ತು.

ಸತಾರಾ ಜಿಲ್ಲೆಯ ಕೊಯ್ನಾ ಅಣೆಕಟ್ಟು ಮತ್ತು ಅಭಯಾರಣ್ಯ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ. ಜಿಲ್ಲೆಯ ಪಟಾನ್ ನಗರ ಹಾಗೂ ಸಮೀಪದ ಗ್ರಾಮಗಳಲ್ಲಿ ಬೆಳಗ್ಗೆ 6.40 ರ ಸುಮಾರಿಗೆ ಭೂಮಿ ನಡುಗಿದೆ ಎಂದು ವರದಿಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com