ರೈಲಿನಲ್ಲಿ ಗುಂಡಿನ ದಾಳಿ ನಡೆಸಿ ಮೂವರ ಕೊಲೆ: ಆರ್‌ಪಿಎಫ್ ಕಾನ್‌ಸ್ಟೆಬಲ್ ಸೇವೆಯಿಂದ ವಜಾ

ಕಳೆದ ತಿಂಗಳು ಚಲಿಸುತ್ತಿರುವ ರೈಲಿನಲ್ಲಿ ತನ್ನ ಹಿರಿಯ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್‌ ಸಿನ್ಹ್ ಚೌಧರಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಕಾನ್ಸ್ ಸ್ಟೇಬಲ್ ಚೇತನ್ ಕುಮಾರ್ ಚೌಧರಿ
ಕಾನ್ಸ್ ಸ್ಟೇಬಲ್ ಚೇತನ್ ಕುಮಾರ್ ಚೌಧರಿ

ಮುಂಬಯಿ: ಕಳೆದ ತಿಂಗಳು ಚಲಿಸುತ್ತಿರುವ ರೈಲಿನಲ್ಲಿ ತನ್ನ ಹಿರಿಯ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಕೊಂದ ಆರ್‌ಪಿಎಫ್ ಕಾನ್‌ಸ್ಟೆಬಲ್ ಚೇತನ್‌ ಸಿನ್ಹ್ ಚೌಧರಿ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಆರ್‌ಪಿಎಫ್ ವಿಭಾಗೀಯ ಭದ್ರತಾ ಆಯುಕ್ತರು, ಚೌಧರಿ ಅವರನ್ನು ವಜಾಗೊಳಿಸಿ ಸೋಮವಾರ ಆದೇಶ ಹೊರಡಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಜುಲೈ 31ರಂದು ಮುಂಬೈ ಹೊರವಲಯದಲ್ಲಿ ಪಾಲ್ಘರ್ ರೈಲು ನಿಲ್ದಾಣದ ಸಮೀಪ ಜೈಪುರ-ಮುಂಬೈ ಸೂಪರ್ ಫಾಸ್ಟ್ ರೈಲಿನಲ್ಲಿ ಚೌಧರಿ (34) ತನ್ನ ಹಿರಿಯ ಅಧಿಕಾರಿ, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಟಿಕರಾಮ್ ಮೀನಾ ಮತ್ತು ಮೂವರು ಪ್ರಯಾಣಿಕರನ್ನು ಗುಂಡಿಕ್ಕಿ ಹತ್ಯೆಗೈದಿದ್ದರು.

ರೈಲಿನ ಬೇರೆ ಬೇರೆ ಬೋಗಿಗಳಲ್ಲಿ ಪ್ರಯಾಣಿಸುತ್ತಿದ್ದ ಮೊಹಮ್ಮದ್ ಹುಸೇನ್ ಭಾನ್‌ಪುರವಾಲಾ, ಸಯ್ಯದ್ ಸಫುದ್ದೀನ್ ಮತ್ತು ಅಸ್ಗರ್ ಅಬ್ಬಾಸ್ ಶೇಖ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಕನಿಷ್ಠ ಮೂರು ಶಿಸ್ತು ಕ್ರಮ ಸಂಬಂಧಿತ ಘಟನೆಗಳಲ್ಲಿ ಆರೋಪಿ ಭಾಗಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಸದ್ಯ ಚೌಧರಿ ನ್ಯಾಯಾಂಗ ಬಂಧನದಲ್ಲಿದ್ದು, ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com