ಎಕೆ-47 ನಿಂದ ಗುಂಡು ಹಾರಿಸಿಕೊಂಡು ಕೋಬ್ರಾ ಕಮಾಂಡೋ ಆತ್ಮಹತ್ಯೆ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಜಂಗಲ್ ವಾರ್‌ಫೇರ್ ಯುನಿಟ್ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಸಿಆರ್‌ಪಿಎಫ್‌ನ ಜಂಗಲ್ ವಾರ್‌ಫೇರ್ ಯುನಿಟ್ ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಇನ್ಸ್‌ಪೆಕ್ಟರ್ ಒಬ್ಬರು ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಜ್ಯ ರಾಜಧಾನಿ ರಾಯ್‌ಪುರದಿಂದ ಸುಮಾರು 400 ಕಿಮೀ ದೂರದಲ್ಲಿರುವ ಬಿಜಾಪುರ ಪಟ್ಟಣದಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 170ನೇ ಬೆಟಾಲಿಯನ್‌ನ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಂತೇವಾಡ ಸೇರಿದಂತೆ ಮೂರು ಜಿಲ್ಲೆಗಳನ್ನು ಒಳಗೊಂಡಿರುವ ದಕ್ಷಿಣ ಬಸ್ತಾರ್‌ನಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ CRPF ಮತ್ತು ಅದರ ಗಣ್ಯ ಘಟಕ CoBRA ಅನ್ನು ವ್ಯಾಪಕವಾಗಿ ನಿಯೋಜಿಸಲಾಗಿದೆ.

ಕೋಬ್ರಾ 210ನೇ ಬೆಟಾಲಿಯನ್‌ನ ಇನ್ಸ್‌ಪೆಕ್ಟರ್ ಸಫಿ ಅಖ್ತರ್ ಎಕೆ-47 ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿದ ಸಹೋದ್ಯೋಗಿಗಳು ಅಲ್ಲಿಗೆ ಧಾವಿಸಿದ್ದು ಗಾಯಗೊಂಡಿದ್ದ ಅಖ್ತರ್ ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅವರು ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದರು.

ಕೌಟುಂಬಿಕ ಸಮಸ್ಯೆಗಳೇ ಆತ್ಮಹತ್ಯೆಗೆ ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಸ್ಥಳದಲ್ಲಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ. ಇನ್ನು ಅವರ ಈ ದುಡುಕು ನಿರ್ಧಾರಕ್ಕೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com