ಬುರ್ಖಾ ಧರಿಸಿ ಲುಲು ಮಾಲ್‌ನ ಮಹಿಳೆಯರ ಶೌಚಾಲಯದಲ್ಲಿ ಆಕ್ಷೇಪಾರ್ಹ ವಿಡಿಯೋ ಮಾಡಿದ ವ್ಯಕ್ತಿ, ವಿಡಿಯೋ ವೈರಲ್!

ಬುರ್ಖಾ ಧರಿಸಿದ್ದ ವ್ಯಕ್ತಿಯೋರ್ವ ಲುಲು ಮಾಲ್ ನ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಅಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.
ಆರೋಪಿ ಬಂಧನ
ಆರೋಪಿ ಬಂಧನ
Updated on

ಬುರ್ಖಾ ಧರಿಸಿದ್ದ ವ್ಯಕ್ತಿಯೋರ್ವ ಲುಲು ಮಾಲ್ ನ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಅಲ್ಲಿ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾನೆ.

ಕೇರಳದ ಕೊಚ್ಚಿಯಲ್ಲಿ ಈ ಘಟನೆ ನಡೆದಿದೆ. ವಾಸ್ತವವಾಗಿ, ಬುರ್ಖಾ ಧರಿಸಿ ಮಹಿಳೆಯರ ಶೌಚಾಲಯಕ್ಕೆ ಪ್ರವೇಶಿಸಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಕ್ತಿಯ ಹೆಸರನ್ನು ಅಭಿಮನ್ಯು ಎಂದು ಹೇಳಲಾಗುತ್ತಿದ್ದು, ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಆಕ್ಷೇಪಾರ್ಹ ವಿಡಿಯೋ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. ವ್ಯಕ್ತಿ ವೃತ್ತಿಯಲ್ಲಿ ಐಟಿ ತಂತ್ರಜ್ಞನಾಗಿದ್ದು, ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ. ಪೊಲೀಸರು ಆತನನ್ನು ಹಿಡಿದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವ್ಯಕ್ತಿಯ ವಿರುದ್ಧ ಹಲವು ಸೆಕ್ಷನ್‌ಗಳಲ್ಲಿ ಪ್ರಕರಣ ದಾಖಲಾಗಿದೆ. ಇದು ಕೊಚ್ಚಿಯ ಪ್ರಸಿದ್ಧ ಲುಲು ಮಾಲ್‌ನ ಘಟನೆ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯು ಇನ್ಫೋಪಾರ್ಕ್‌ನಲ್ಲಿರುವ ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುರ್ಕಾ ಧರಿಸಿ ಮಹಿಳೆಯರ ಶೌಚಾಲಯಕ್ಕೆ ನುಗ್ಗಿ ಮೊಬೈಲ್ ಅಲ್ಲೇ ಬಚ್ಚಿಟ್ಟಿದ್ದಾನೆ.

ಆರೋಪಿ ತನ್ನ ಮೊಬೈಲ್ ಅನ್ನು ಚಿಕ್ಕ ಕಾರ್ಡ್ ಬೋರ್ಡ್ ನಲ್ಲಿ ಬಚ್ಚಿಟ್ಟು ಬಾಗಿಲಿಗೆ ಅಂಟಿಸಿದ್ದಾನೆ. ಇದೀಗ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದು, ಆತನ ಫೋನ್ ಕೂಡ ವಶಪಡಿಸಿಕೊಂಡಿದ್ದಾರೆ. ವ್ಯಕ್ತಿ ಯಾಕೆ ಈ ಕ್ರಮಕ್ಕೆ ಮುಂದಾದ, ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಈ ಘಟನೆಯಲ್ಲಿ ಆತನೊಂದಿಗೆ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಅಥವಾ ಇಲ್ಲವೇ ಎಂದು ಆರೋಪಿಯಿಂದ ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಆರೋಪಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಘಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೆಲ ಸೆಕೆಂಡುಗಳ ಈ ವಿಡಿಯೋದಲ್ಲಿ ಆರೋಪಿ ಬುರ್ಖಾ ಧರಿಸಿ ಹಲವು ಮಂದಿಗೆ ಸಿಕ್ಕಿಬಿದ್ದಿದ್ದು ಹೇಗೆ ಎಂಬುದನ್ನು ನೋಡಬಹುದು. ಈ ವೇಳೆ ಆರೋಪಿಯೂ ಮುಖ ಮರೆಸಿಕೊಂಡಿರುವುದು ಕಂಡು ಬಂದಿದೆ. ವಿಡಿಯೋ ಹೊರಬಿದ್ದ ಬಳಿಕ ಸಾಮಾಜಿಕ ಜಾಲತಾಣ ಬಳಕೆದಾರರೂ ಇದಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com