ಇಂದೋರ್: ಸಾಕು ನಾಯಿಗಳ ವಿಚಾರಕ್ಕೆ ಗುಂಡಿನ ದಾಳಿ; ಇಬ್ಬರು ಸ್ಥಳದಲ್ಲೇ ಸಾವು; ಆರು ಮಂದಿಗೆ ಗಾಯ

ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು  ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಇಂದೋರ್‌: ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು ಕೃಷ್ಣಾ ಬಾಗ್ ಕಾಲೋನಿಯಲ್ಲಿ ರಾಜ್‌ಪಾಲ್ ರಜಾವತ್ ಎಂದು ಗುರುತಿಸಲಾಗಿದೆ, ಈತ "ಬ್ಯಾಂಕ್ ಆಫ್ ಬರೋಡಾದ ಸ್ಥಳೀಯ ಶಾಖೆಯಲ್ಲಿ  ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಕುನಾಯಿಗಳ ವಿಚಾರಕ್ಕೆ ನೆರೆಹೊರೆಯವರ ನಡುವೆ ಜಗಳ ನಡೆದಿದೆ. ಮಾತಿನ ಚಕಮಕಿ ನಡೆಯುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಕೋಪಗೊಂಡ ರಜಾವತ್, ಮೊದಲು ಗಾಳಿಯಲ್ಲಿ ಗುಂಡು ಹಾರಿಸಿದ್ದ ಬಳಿಕ ಮನೆ ಮುಂದೆ ನೆರೆದಿದ್ದ ಜನರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಇಂದೋರ್‌ನ ಹೆಚ್ಚುವರಿ ಡಿಸಿಪಿ ಅಮರೇಂದ್ರ ಸಿಂಗ್ ಹೇಳಿದ್ದಾರೆ.

ಗುಂಡಿನ ದಾಳಿಯಲ್ಲಿ ವಿಮಲ್ (35) ಮತ್ತು ರಾಹುಲ್ ವರ್ಮಾ (28) ಎಂಬ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ, ಆರು ಮಂದಿ ಗಾಯಗೊಂಡಿದ್ದಾರೆ, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಕೃಷ್ಣಬಾಗ್ ಕಾಲೋನಿ ಪ್ರದೇಶದಲ್ಲಿ ರಾಜಾವತ್ ತನ್ನ ಸಾಕು ನಾಯಿಯನ್ನು ವಾಕಿಂಗ್‌ಗೆ ಕರೆದೊಯ್ಯುತ್ತಿದ್ದಾಗ ವಾಗ್ವಾದ ಪ್ರಾರಂಭವಾಯಿತು. ರಾಜಾವತ್‌ನ ನಾಯಿ ನೆರೆಹೊರೆಯವರ ಮತ್ತೊಂದು ನಾಯಿಯೊಂದಿಗೆ ಜಗಳವಾಡಲು ಪ್ರಾರಂಭಿಸಿದೆ. ಇದರಿಂದ ನಾಯಿಗಳ ಮಾಲೀಕರ ನಡುವೆ ಕಲಹಕ್ಕೆ ಕಾರಣವಾಗಿದೆ ಎಂದು ಪೊಲೀಸರು ವಿವರಿಸಿದ್ದಾರೆ.

ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದು ರಾಜಾವತ್ ಮನೆಗೆ ಹೋಗಿ ಬಂದೂಕು ತೆಗೆದುಕೊಂಡು ಟೇರೆಸ್ ಮೇಲೆ ನಿಂತು ಜಗಳ ನೋಡಲು ನಿಂತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com