ಬಿಹಾರ: ದೈನಿಕ್ ಜಾಗರಣ್ ಪತ್ರಕರ್ತನ ಹತ್ಯೆ ಪ್ರಕರಣ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.
ಮೃತ ಪತ್ರಕರ್ತ ವಿಮಲ್ ಯಾದವ್
ಮೃತ ಪತ್ರಕರ್ತ ವಿಮಲ್ ಯಾದವ್

ಪಾಟ್ನಾ: ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಶುಕ್ರವಾರ ಮುಂಜಾನೆ ಅರಾರಿಯಾ ಜಿಲ್ಲೆಯಲ್ಲಿ ಪತ್ರಕರ್ತರೊಬ್ಬರನ್ನು ಮನೆಯಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪತ್ರಕರ್ತನನ್ನು ವಿಮಲ್ ಯಾದವ್ ಎಂದು ಗುರುತಿಸಲಾಗಿದ್ದು, ದೈನಿಕ್ ಜಾಗರಣದಲ್ಲಿ ಉದ್ಯೋಗಿಯಾಗಿದ್ದರು. ರಾಣಿಗಂಜ್‌ನಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ನಾಲ್ವರು ಆತನ ಎದೆಗೆ ಗುಂಡು ಹಾರಿಸಿ ಶುಕ್ರವಾರ ಹತ್ಯೆಗೈದಿದ್ದರು.

ದುಷ್ಕರ್ಮಿಗಳು ಇಂದು ಬೆಳಗಿನ ಜಾವ 5.30 ರ ಸುಮಾರಿಗೆ ಯಾದವ್ ಅವರ ಮನೆಗೆ ತೆರಳಿದ್ದು, ಅವರು ಗೇಟ್ ತೆರೆದ ತಕ್ಷಣ ಗುಂಡಿನ ದಾಳಿ ನಡೆಸಿದ್ದಾರೆ" ಎಂದು ಬಿಹಾರ ಪೊಲೀಸರು ಟ್ವೀಟ್ ಮಾಡಿದ್ದರು.

ಈ ಕುರಿತು ಮಾತನಾಡಿದ ಹಿರಿಯ ಫಿಲೊಸ್ ಅಧಿಕಾರಿ ಬಿಮಲ್ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಎಂಟು ಮಂದಿ ಕೊಲೆ ಆರೋಪಿಗಳನ್ನು ಹೆಸರಿಸಲಾಗಿದ್ದು, ಈ ಪೈಕಿ ನಾಲ್ವರನ್ನು ಇಂದು ಮುಂಜಾನೆ ವಿಚಾರಣೆಗೊಳಪಡಿಸಲಾಗಿದೆ. ಆರೋಪಿಗಳು 2019 ರಲ್ಲಿ ವಿಮಲ್ ಯಾದವ್ ಅವರ ಸಹೋದರನನ್ನು ಸಹ ಕೊಲೆ ಮಾಡಿದ್ದರು. ಆ ಪ್ರಕರಣದಲ್ಲಿ ಬಿಮಲ್ ಏಕೈಕ ಸಾಕ್ಷಿಯಾಗಿದ್ದರು ಮತ್ತು ಅವರ ಸಾಕ್ಷ್ಯವನ್ನು ನಾಶಪಡಿಸಲು ಈ ಹತ್ಯೆ ನಡೆಸಿದರೇ ಎಂಬುದು ತನಿಖೆ ಬಳಿಕ ಗೊತ್ತಾಗಲಿದೆ ಎಂದಿದ್ದಾರೆ.

ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ, ಕಾನೂನು ಮತ್ತು ಸುವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ವಿಫಲವಾದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com