ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವಾಗ ಎಚ್ಚರವಿರಲಿ: ಸುಪ್ರೀಂ ಕೋರ್ಟ್

ಸಾಮಾಜಿಕ ಜಾಲತಾಣ ಬಳಕೆದಾರರು ಅದರ ಪರಿಣಾಮಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
Updated on

ನವದೆಹಲಿ: ಸಾಮಾಜಿಕ ಜಾಲತಾಣ ಬಳಕೆದಾರರು ಅದರ ಪರಿಣಾಮಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. 

ಪತ್ರಕರ್ತೆಯರ ವಿರುದ್ಧ ಅವಹೇಳನಕಾರಿ ಟೀಕೆಗಳಗಳನ್ನು ಹೊಂದಿದ್ದ ಪೋಸ್ಟ್ ನ್ನು 2018 ರಲ್ಲಿ ಹಂಚಿಕೊಂಡಿದ್ದ ತಮಿಳುನಾಡು ನಟ ಹಾಗೂ ಮಾಜಿ ಶಾಸಕ ಶೇಖರ್ ವಿರುದ್ಧದ ಪ್ರಕರಣದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಸಲಹೆ ನೀಡಿದ್ದು ಶೇಖರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಶೇಖರ್ ತಮ್ಮ ವಿರುದ್ಧದ ಪ್ರಕರಣಗಳನ್ನು ರದ್ದುಗೊಳಿಸಬೇಕೆಂದು ಮನವಿ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಜು.14 ರಂದು ವಜಾಗೊಳಿಸಿತ್ತು. ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದ ಶೇಖರ್ ಅರ್ಜಿ ವಿಚಾರಣೆಯನ್ನು ನ್ಯಾ. ಬಿಆರ್ ಗವಾಯಿ ಹಾಗೂ ಪಿಕೆ ಮಿಶ್ರಾ ಅವರಿದ್ದ ಪೀಠ ನಡೆಸಿದ್ದು, ಈ ಪೀಠವೂ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: "ಈ ಕಡೆ ಅಥವಾ ಆ ಕಡೆ", ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು- ಸುಪ್ರೀಂ ಕೋರ್ಟ್
 
ಓರ್ವ ವ್ಯಕ್ತಿ ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದಾನೆಂದರೆ, ಆತ ಅದು ತಲುಪುವುದು ಹಾಗೂ ಅದರ ಪರಿಣಾಮಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಅರ್ಜಿದಾರರ ಪರ ವಕೀಲರಿಗೆ ಕೋರ್ಟ್ ಹೇಳಿದೆ. 

ಶೇಖರ್ ಅವರು ಆ ಪೋಸ್ಟ್ ನ್ನು ಹಂಚಿಕೊಂಡಿದ್ದ ದಿನದಂದು ಕಣ್ಣಿಗೆ ಔಷಧಿ ಹಾಕಿಕೊಂಡಿದ್ದರ ಪರಿಣಾಮ ಅವರಿಗೆ ಪೋಸ್ಟ್ ನಲ್ಲಿ ಏನು ಬರೆದಿದೆ ಎಂಬುದನ್ನು ಪೂರ್ತಿ ಓದಲು ಸಾಧ್ಯವಾಗಿರಲಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಆದ್ದರಿಂದ ನ್ಯಾಯಾಲಯ ಸಾಮಾಜಿಕ ಜಾಲತಾಣ ಬಳಕೆ ಮಾಡಬೇಕಾದರೆ ಎಚ್ಚರದಿಂದ ಇರಬೇಕು ಎಂದು ಹೇಳಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com