ಕೇರಳ: ಕಣ್ಣೂರಿನಲ್ಲಿ ರೈಲಿನ ಮೇಲೆ ಕಲ್ಲು ತೂರಾಟ, ಒಡಿಶಾದ ವ್ಯಕ್ತಿ ಬಂಧನ

ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.
ಸಾಂದರ್ಭಿಕ ಸಾವು
ಸಾಂದರ್ಭಿಕ ಸಾವು

ಕಣ್ಣೂರು: ಕಳೆದ ವಾರ ಕೇರಳದ ಕಣ್ಣೂರಿನಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಒಡಿಶಾದ ವಲಸೆ ಕಾರ್ಮಿಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿಯನ್ನು ಒಡಿಶಾ ನಿವಾಸಿ ಸರ್ವೇಶ್ ಎಂದು ಗುರುತಿಸಲಾಗಿದೆ.

ಆರೋಪಿ ಆಗಸ್ಟ್ 13 ರಂದು ಬೆಳಿಗ್ಗೆ 7.00 ರಿಂದ 7:30 ರ ನಡುವೆ ನೇತ್ರಾವತಿ ಎಕ್ಸ್‌ಪ್ರೆಸ್ ಮತ್ತು ಚೆನ್ನೈ ಸೂಪರ್ ಫಾಸ್ಟ್ ರೈಲಿಗೆ ಕಲ್ಲು ತೂರಾಟ ನಡೆಸಿದ್ದಾನೆ ಎಂದು ಕಣ್ಣೂರು ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ತಿಳಿಸಿದ್ದಾರೆ.

ಎರಡು ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಕ್ಕಾಗಿ ಆರೋಪಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬಂಧಿತ ವ್ಯಕ್ತಿ ಸರ್ವೇಶ್, ಒಂದು ದಶಕದಿಂದ ಕಣ್ಣೂರಿನಲ್ಲಿ ಪೇಂಟರ್ ಆಗಿ ಕೆಲಸ ಮಾಡುತ್ತಿದ್ದು, ಅಂದು ಕುಡಿದ ಸ್ಥಿತಿಯಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರಿಸುಮಾರು 200 ಸಿಸಿಟಿವಿ ರೆಕಾರ್ಡಿಂಗ್ ಪರಿಶೀಲಿಸಿದ ನಂತರ ಆರೋಪಿ ಸಿಕ್ಕಿಬಿದಿದ್ದು, ಅಪರಾಧ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳೆದ ತಿಂಗಳು ಹೊಸದಾಗಿ ಆರಂಭಿಸಲಾಗಿದ್ದ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿತ್ತು. ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಡೂರು-ಬೀರೂರು ವಿಭಾಗದ ನಡುವೆ ಬೆಳಿಗ್ಗೆ 8.40 ಕ್ಕೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com