
ಲಡಾಕ್: ಸೇನಾ ವಾಹನ ನದಿಗೆ ಉರುಳಿ ಬಿದ್ದು ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿ 9 ಯೋಧರು ಹುತಾತ್ಮರಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಲೇಹ್ ಬಳಿ ನಡೆದ ದುರ್ಘಟನೆಯಲ್ಲಿ ನಾವು ನಮ್ಮ ಭಾರತೀಯ ಸೇನೆಯ ಸಿಬ್ಬಂದಿಗಳನ್ನು ಕಳೆದುಕೊಂಡಿದ್ದೇವೆ ಎಂದು ಹೇಳಲು ನೋವಾಗುತ್ತಿದೆ. ದೇಶಕ್ಕೆ ಅವರು ನೀಡಿರುವ ಉತ್ಕೃಷ್ಟ ಸೇವೆ ಸದಾ ಸ್ಮರಣೀಯ. ಮೃತ ಕುಟುಂಬಗಳಿಗೆ ಸಂತಾಪಗಳು ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹೇಳಿದ್ದಾರೆ.
ಲೇಹ್‌ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭಾರತೀಯ ಸೇನಾ ಸಿಬ್ಬಂದಿಯ ಜೀವ ಕಳೆದುಕೊಂಡಿರುವ ವಿಚಾರ ತಿಳಿದು ತೀವ್ರ ದುಃಖವಾಯಿತು. ಮೃತರ ಕುಟುಂಬಗಳಿಗೆ ಸಂತಾಪವನ್ನು ತಿಳಿಸುತ್ತೇನೆ. ದೇವರು ಅವರಿಗೆ ಈ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರಗತಿಯಲ್ಲಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆಂದು ತಿಳಿಸಿದ್ದಾರೆ
Advertisement