ಜಮ್ಮು- ಕಾಶ್ಮೀರ: ಪುಲ್ವಾಮಾದಲ್ಲಿ ಮುಂದುವರೆದ ಭದ್ರತಾ ಪಡೆಗಳ ಕಾರ್ಯಾಚರಣೆ; ಓರ್ವ ಭಯೋತ್ಪಾದಕನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲಾರೋ-ಪರಿಗಮ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕನನ್ನು ಹತ್ಯೆಗೈದಿದ್ದಾರೆ ಎಂದು ವರದಿಯಾಗದೆ.

ತಡರಾತ್ರಿ ಆರಂಭವಾದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ಯೆಯಾದ ಭಯೋತ್ಪಾದಕನನ್ನು ಲಷ್ಕರ್-ಎ-ತೊಯ್ಬಾದ ಉನ್ನತ ಕಮಾಂಡರ್ ಎನ್ನಲಾಗಿದ್ದು, ಮೃತದೇಹ ಇನ್ನೂ ಪತ್ತೆಯಾಗಿಲ್ಲ.

ಪುಲ್ವಾಮಾದ ಲಾರೋ-ಪರಿಗಮ್ ಪ್ರದೇಶದಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಪೊಲೀಸ್ ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.  ಉಗ್ರರೊಂದಿಗೆ ಗುಂಡಿನ ಚಕಮಕಿ ಸೋಮವಾರವೂ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com