ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಕಂಟೈನರ್ ಪಲ್ಟಿ, ಇಬ್ಬರು ಸಾವು

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್‌ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 
ಅಪಘಾತದ ಚಿತ್ರ
ಅಪಘಾತದ ಚಿತ್ರ

ರಾಯಗಢ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಸೋಮವಾರ ಬೆಳಗ್ಗೆ ಕಂಟೈನರ್ ಪಲ್ಟಿಯಾಗಿ, ಡಿವೈಡರ್‌ಗೆ ಜಿಗಿದು ಐದು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಜಿಲ್ಲೆಯ ಖೋಪೋಲಿ ಪ್ರದೇಶದಲ್ಲಿ ಬೆಳಿಗ್ಗೆ 9.00 ಗಂಟೆಗೆ ಈ ಘಟನೆ ನಡೆದಿದ್ದು, ಕಂಟೈನರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ವಾಹನ ಪಲ್ಟಿ ಹೊಡೆದು ಇನ್ನೊಂದು ಮಾರ್ಗದಲ್ಲಿ ಎದುರಿನಿಂದ ಬರುತ್ತಿದ್ದ ಐದು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಪುಣೆಯಿಂದ ಮುಂಬೈಗೆ ತೆರಳುತ್ತಿದ್ದ ಕಂಟೈನರ್ ಅತಿವೇಗದ ಕಾರಣ ನಿಯಂತ್ರಣ ತಪ್ಪಿ, ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಕಂಟೈನರ್ ಅಡಿಯಲ್ಲಿ ಐದು ಕಾರುಗಳು ಬಿದ್ದಿದ್ದು, ಮಹಿಳೆ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com