ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ಸರ್ಕಾರಿ ಅಧಿಕಾರಿಯನ್ನು ಅಮಾನತುಗೊಳಿಸಿ ದೆಹಲಿ ಸಿಎಂ ಆದೇಶ

ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್

ನವದೆಹಲಿ: ಮೃತ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ತಿಂಗಳುಗಳ ಕಾಲ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಸರ್ಕಾರಿ ಅಧಿಕಾರಿಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇನ್ನು ಪ್ರಕರಣ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮತ್ತು ಆತನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದೆಹಲಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಿಯೋಜನೆಗೊಂಡಿರುವ ಉಪನಿರ್ದೇಶಕ ಹಲವಾರು ತಿಂಗಳುಗಳಿಂದ ತನ್ನ ಸ್ನೇಹಿತನ ಮಗಳ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿ ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ಆರೋಪಿಯ ಪತ್ನಿಯನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

ಎಫ್‌ಐಆರ್‌ಗೆ 120ಬಿ ಅಂದರೆ ಕ್ರಿಮಿನಲ್ ಪಿತೂರಿಯ ಸೆಕ್ಷನ್‌ಗಳನ್ನು ಸೇರಿಸಲಾಗಿದೆ. ಸಂತ್ರಸ್ತೆಯನ್ನು ಸಿವಿಲ್ ಲೈನ್ ಪ್ರದೇಶದ ಶಾಲೆಯ 12ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ. ಇಲಾಖೆಯ ಅಧಿಕಾರಿಯೊಬ್ಬರು ತಮ್ಮ ಸ್ನೇಹಿತನ ಅಪ್ರಾಪ್ತ ಮಗಳ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ತಂದೆ 2020ರ ಅಕ್ಟೋಬರ್ 1ರಂದು ನಿಧನರಾಗಿದ್ದರು.  ಅಂದಿನಿಂದ ಸಂತ್ರಸ್ತೆ ಆರೋಪಿ ಮತ್ತು ಅವನ ಕುಟುಂಬದೊಂದಿಗೆ ಅವರ ಮನೆಯಲ್ಲಿ ವಾಸಿಸುತ್ತಿದ್ದಳು.

DCW ಪೊಲೀಸರಿಗೆ ನೋಟಿಸ್
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ದೀರ್ಘಕಾಲದಿಂದ ಉಪನಿರ್ದೇಶಕ ಹುದ್ದೆಯಲ್ಲಿದ್ದ ಸರ್ಕಾರಿ ಅಧಿಕಾರಿಯೊಬ್ಬರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದಾರೆ. ಅಧಿಕಾರಿ ಮತ್ತು ಆತನ ಪತ್ನಿ ಸಂತ್ರಸ್ತೆಯನ್ನು ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ನಾವು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದ್ದು, ಅವರನ್ನು ಇನ್ನೂ ಏಕೆ ಬಂಧಿಸಿಲ್ಲ? ನಾವು ದೆಹಲಿ ಸರ್ಕಾರಕ್ಕೂ ನೋಟಿಸ್ ನೀಡುತ್ತಿದ್ದೇವೆ. ಏಕೆಂದರೆ ಅವರ ವಿರುದ್ಧದ ದೂರುಗಳು ಯಾವುವು ಮತ್ತು ಅವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಯಲು ನಾವು ಬಯಸುತ್ತೇವೆ? ಎಂದು ಹೇಳಿದ್ದಾರೆ.

ಈ ಘಟನೆ ಮಾನವೀಯತೆ ತಲೆತಗ್ಗಿಸುವಂತೆ ಮಾಡಿದೆ ಎಂದು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಇಷ್ಟೊತ್ತಿಗೆ ಕ್ರಮ ಕೈಗೊಳ್ಳಬೇಕಿತ್ತು ಆದರೆ ಕ್ರಮ ಕೈಗೊಳ್ಳದಿದ್ದಲ್ಲಿ ಸ್ವತಃ ಸಿಎಂ ಅರವಿಂದ್ ಕೇಜ್ರಿವಾಲ್ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com