ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿ: ಫಡ್ನವಿಸ್

ಟೊಮೆಟೊ ಬೆಲೆ ಸ್ವಲ್ಪ ತಗ್ಗುತ್ತಿದ್ದಂತೆಯೇ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಟೊಮೆಟೊ ಬೆಲೆ ಸ್ವಲ್ಪ ತಗ್ಗುತ್ತಿದ್ದಂತೆಯೇ ಇದೀಗ ಈರುಳ್ಳಿ ಬೆಲೆಯೂ ಏರಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರದಿಂದ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲಾಗುತ್ತಿದೆ ಎಂದು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ.

ಪ್ರತಿ ಕ್ವಿಂಟಲ್‌ಗೆ ರೂ.2,410  ದರದಲ್ಲಿ 2 ಲಕ್ಷ ಮೆಟ್ರಿಕ್ ಟನ್ ಈರುಳ್ಳಿ ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ನಾಸಿಕ್ ಮತ್ತು ಅಹಮದ್‌ನಗರದಲ್ಲಿ ವಿಶೇಷ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಬೆಲೆ ಏರಿಕೆಯನ್ನು ತಡೆಯಲು ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಪೂರೈಕೆ ಸುಧಾರಿಸಲು ಈರುಳ್ಳಿ ಮೇಲೆ ಶೇಕಡಾ 40 ರಷ್ಟು ರಫ್ತು ಸುಂಕ ವಿಧಿಸುವ ಕೇಂದ್ರದ ನಿರ್ಧಾರದ ವಿರುದ್ಧ ರೈತರು ಮತ್ತು ವ್ಯಾಪಾರಿಗಳ ಪ್ರತಿಭಟನೆ ನಡೆಸುತ್ತಿರುವಂತೆಯೇ  ಫಡ್ನವೀಸ್ ಈ ರೀತಿಯ ಹೇಳಿಕೆ ನೀಡಿದ್ದಾರೆ. 

ಆಗಸ್ಟ್ 19 ರಂದು ಹಣಕಾಸು ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಪ್ರಕಾರ ಈ ವರ್ಷಾಂತ್ಯದವರೆಗೂ ಈರುಳ್ಳಿಯ ಮೇಲೆ ಶೇಕಡಾ 40 ರಷ್ಟು ರಫ್ತು ಸುಂಕವನ್ನು ವಿಧಿಸಲಾಗಿದೆ. ಪ್ರಸ್ತುತ ಜಪಾನ್ ಪ್ರವಾಸದಲ್ಲಿರುವ ಫಡ್ನವಿಸ್ ಈ ಕುರಿತು ಟ್ವೀಟ್ ಮಾಡಿದ್ದು,  ಈರುಳ್ಳಿ ಸಮಸ್ಯೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ  ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. 

ಭಾರತದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆಯಾಗಿರುವ ಲಾಸಲ್‌ಗಾಂವ್ ಸೇರಿದಂತೆ ನಾಸಿಕ್‌ನ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಈರುಳ್ಳಿ ಹರಾಜನ್ನು ಅನಿರ್ದಿಷ್ಟಾವಧಿಗೆ ಮುಚ್ಚಲು ಸೋಮವಾರ ವ್ಯಾಪಾರಿಗಳು  ನಿರ್ಧರಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com