ಮುಂದಿನ ತಿಂಗಳು ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯಯಾನ ಕೈಗೊಳ್ಳಲಿರುವ ಇಸ್ರೋ!

ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥರು ಸೂರ್ಯನ ಅಧ್ಯಯನಕ್ಕಾಗಿ ಮಿಷನ್ ಆದತ್ಯ-ಎಲ್ 1 ನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. 
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ

ನವದೆಹಲಿ: ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಮುಖ್ಯಸ್ಥರು ಸೂರ್ಯನ ಅಧ್ಯಯನಕ್ಕಾಗಿ ಮಿಷನ್ ಆದತ್ಯ-ಎಲ್ 1 ನ್ನು ಕೈಗೊಳ್ಳುವುದಾಗಿ ಹೇಳಿದ್ದಾರೆ. 

ಸೆಪ್ಟೆಂಬರ್ ಮೊದಲ ವಾರದಲ್ಲಿ ಆದಿತ್ಯ ಎಲ್-1 ಮಿಷನ್ ನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸೋಮನಾಥ್ ಹೇಳಿದ್ದಾರೆ.
 
ಆದಿತ್ಯ ಎಲ್-1 ಭಾರತ ಸೂರ್ಯನ ಅಧ್ಯಯನಕ್ಕಾಗಿ ಕೈಗೊಳ್ಳುತ್ತಿರುವ ಮೊದಲ ಮಿಷನ್ ಆಗಿದೆ. 

ಸೂರ್ಯನನ್ನು ಅಧ್ಯಯನ ಮಾಡುವ ಮಿಷನ್ ಆದಿತ್ಯ ಎಲ್ 1 ರ ಉಡಾವಣೆ ಕುರಿತು ಮಾಹಿತಿ ನೀಡಿದ ಇಸ್ರೋ ಮುಖ್ಯಸ್ಥರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲವೂ ಯೋಜನೆಯ ಪ್ರಕಾರ ನಡೆಯುತ್ತಿದೆ ಮತ್ತು ಸೆಪ್ಟೆಂಬರ್ ಮೊದಲ ವಾರದಲ್ಲಿ ಇದನ್ನು ಪ್ರಾರಂಭಿಸಲಾಗುವುದು ಎಂದು ಹೇಳಿದರು.

"ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ L1 ನ ಮಿಷನ್ ಶೀಘ್ರದಲ್ಲೇ ಉಡಾವಣೆಯಾಗಲಿದೆ. ನಾವು ಅದನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಪ್ರಾರಂಭಿಸಲು ಯೋಜಿಸುತ್ತಿದ್ದೇವೆ. ಎಲ್ಲವೂ ಯೋಜನೆಯಂತೆ ನಡೆಯುತ್ತಿದೆ. ಈ ಉಡಾವಣೆಯು ದೀರ್ಘವೃತ್ತದ ಕಕ್ಷೆಗೆ ಹೋಗುತ್ತದೆ ಮತ್ತು ಅಲ್ಲಿಂದ ಅದು ಪ್ರಯಾಣಿಸುತ್ತದೆ. ಎಲ್ 1 ಪಾಯಿಂಟ್ ಇದು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ" ಎಂದು ಎಸ್ ಸೋಮನಾಥ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com